ಮುಂಬೈ : ಮಹಾರಾಷ್ಟ್ರ ವಿಧಾನಸಭಾ ಚುನಾವಣೆಯಲ್ಲಿ ಎನ್ ಡಿ ಎ ಮೈತ್ರಿಕೂಟ ಮ್ಯಾಜಿಕ್ ಫಿಗರ್ 145 ರ ಗಡಿ ದಾಟಿದೆ. ಈ ಮೂಲಕ ಮಹಾರಾಷ್ಟ್ರದಲ್ಲಿ ಮತ್ತೊಮ್ಮೆ ಅಧಿಕಾರಕ್ಕೆ ಏರುವ ಎಲ್ಲಾ ಸಾಧ್ಯತೆ ನಿಚ್ಚಳವಾಗಿದೆ. ಕಾಂಗ್ರೆಸ್ ಮೈತ್ರಿಕೂಟ ಸದ್ಯ 97 ಸ್ಥಾನಗಳಲ್ಲಿ ಮುನ್ನಡೆಯಲ್ಲಿದೆ. ಇತರರು 5 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದ್ದಾರೆ. ಮಧ್ಯಾಹ್ನದ ವೇಳೆಗೆ ಸ್ಪಷ್ಟ ಚಿತ್ರಣ ಲಭಿಸುವ ಸಾಧ್ಯತೆ ಇದೆ.

ಇನ್ನೊಂದಡೆ ಜಾರ್ಖಂಡ್ ನಲ್ಲಿ ಸದ್ಯದ ಬೆಳವಣಿಗೆ ಗಮನಿಸಿದರೆ ಎನ್.ಡಿ.ಎ ಮೈತ್ರಿಕೂಟ ಮತ್ತೆ ಅಧಿಕಾರ ಹಿಡಿಯುವ ಸಾಧ್ಯತೆ ಹೆಚ್ಚಾಗಿದೆ.

ಶಿಗಾವಿಯಲ್ಲಿ ಬಿಜೆಪಿಯ ಭರತ್ ಬೊಮ್ಮಾಯಿ, ಚನ್ನಪಟ್ಟಣದಲ್ಲಿ ಜೆಡಿಎಸ್ ನ ನಿಖಿಲ್ ಕುಮಾರಸ್ವಾಮಿ ಮತ್ತು ಸಂಡೂರಿನಲ್ಲಿ ಬಿಜೆಪಿಯ ಹನುಮಂತು ಸದ್ಯ ಮುನ್ನಡೆ ಸಾಧಿಸಿದ್ದಾರೆ.