ಬೆಂಗಳೂರು : ಫೆಂಗಲ್ ಚಂಡಮಾರುತ ತಮಿಳುನಾಡು ಹಾಗೂ ಪುದುಚೇರಿ ಕರಾವಳಿ ಪ್ರದೇಶಕ್ಕೆ ಅಪ್ಪಳಿಸಿದ್ದು ದಾಖಲೆಯ ಮಳೆ ಸುರಿಸುತ್ತಿದೆ.

ತಮಿಳುನಾಡಿನ ಕರಾವಳಿ ಜಿಲ್ಲೆಗಳಲ್ಲಿ ದಾಖಲೆಯ ಮಳೆಯ ಪ್ರಮಾಣ 450 ಮಿ.ಮೀ ದಾಟಿದೆ. ಪಾಂಡಿಚೇರಿ, ಚೆನ್ನೈ, ಚೆಂಗಲ್ಪಟ್ಟು, ವಿಲ್ಲುಪುರಂ, ತಿರುವಣ್ಣಾಮಲೈ, ತಿರುವಳ್ಳು‌ರ್, ಕಾಂಚೀಪುರಂ, ಕೂಡೂರು ಜಿಲ್ಲೆಗಳಲ್ಲಿ ಭಾರೀ ಮಳೆಯಾಗಿದ್ದು ರೆಡ್ ಅಲರ್ಟ್ ಘೋಷಿಸಲಾಗಿದೆ. ಈ ಜಿಲ್ಲೆಗಳಲ್ಲಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಕರ್ನಾಟಕದಲ್ಲೂ ಹಲವು ಜಿಲ್ಲೆಗಳಲ್ಲಿ ಭರ್ಜರಿ ಮಳೆ ಮುನ್ಸೂಚನೆ ಇದೆ. ಹಾಗಾಗಿ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ. ನಿರಂತರ ಜಡಿ ಮಳೆ ಹಾಗೂ ವಿಪರೀತ ಚಳಿ ಹಿನ್ನೆಲೆಯಲ್ಲಿ ಕೋಲಾರ ಜಿಲ್ಲೆಯ ಶಾಲಾ ಕಾಲೇಜುಗಳಿಗೆ ಸೋಮವಾರ ಒಂದು ದಿನ ರಜೆ ಘೋಷಣೆ ಮಾಡಲಾಗಿದೆ. ರಜೆಯನ್ನು ಮತ್ತೊಂದು ರಜಾ ದಿನದಲ್ಲಿ ತರಗತಿ ನಡೆಸಿ ಸರಿದೂಗಿಸಲು ತೀರ್ಮಾನಿಸಲಾಗಿದೆ.