ಬೆಳಗಾವಿ: ಬಿ.ವಿ.ಬೆಲ್ಲದ ಕಾನೂನು ಮಹಾವಿದ್ಯಾಲಯವು “ಭಾರತದಲ್ಲಿ ಚುನಾವಣೆಗೆ ಸ್ಪರ್ಧಿಸಲು ಶೈಕ್ಷಣಿಕ ಅರ್ಹತೆ ಕಡ್ಡಾಯ” ಎಂಬ ವಿಷಯದ ಕುರಿತು ಆಯೋಜಿಸಿದ್ದ ರಾಜ್ಯಮಟ್ಟದ ಚರ್ಚಾ ಸ್ಪರ್ಧೆಯಲ್ಲಿ ಬೆಳಗಾವಿಯ ಆರ್ .ಎಲ್ .ಕಾನೂನು ಮಹಾವಿದ್ಯಾಲಯದ ವಿದ್ಯಾರ್ಥಿಗಳು ಸಾಧನೆ ಮಾಡಿದ್ದಾರೆ. ಸ್ಪರ್ಧೆಯಲ್ಲಿ 20ಕ್ಕೂ ಹೆಚ್ಚು ತಂಡಗಳು ಭಾಗವಹಿಸಿದ್ದವು. ಕೆಎಲ್‌ಎಸ್‌ನ ಆರ್.ಎಲ್. ಕಾನೂನು ಮಹಾವಿದ್ಯಾಲಯದ ವಿದ್ಯಾರ್ಥಿಗಳಾದ ಮಲ್ಲಿಕಾರ್ಜುನ ಪೂಜಾರಿ ಮತ್ತು ಫಣಿ ರಾಘವೇಂದ್ರ ಪ್ರಥಮ ಬಹುಮಾನ ಪಡೆದರು.

ಕಾಲೇಜಿನ ಆಡಳಿತ ಮಂಡಳಿ ಅಧ್ಯಕ್ಷ ಎಂ.ಆರ್.ಕುಲಕರ್ಣಿ, ಪ್ರಾಚಾರ್ಯ ಡಾ.ಎ.ಎಚ್. ಹವಾಲ್ದಾರ್, ಚರ್ಚಾ ಒಕ್ಕೂಟದ ಅಧ್ಯಕ್ಷ ಪ್ರೊ.ಎಂ.ಎಸ್.ಕುಲಕರ್ಣಿ, ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಬಹುಮಾನ ವಿಜೇತರನ್ನು ಅಭಿನಂದಿಸಿದ್ದಾರೆ.

R.L Law College Students won a State-level Debate Competition

Belagavi: B.V Bellad Law College had organised a state-level debate competition on “Educational Qualification is must to contest elections in India”, more than 20 teams participated in the competition. Students of KLS R.L. Law College Mr Mallikarjun Pujari and Mr Phani Raghavendra won first prize in kannada debate competition.
M.R Kulkarni, Chairman of the college’s governing council, principal Dr A.H. Hawaldar, Prof M.S Kulkarni Debate union chairman and other staff and students congratulated the prize winners on this occasion.