ಬೆಳಗಾವಿ : ವಿದ್ಯಾರ್ಥಿಗಳು ಸಂತೋಷ ಹಾಗೂ ಆರೋಗ್ಯಕರ ಜೀವನ ನಡೆಸಲು ಡ್ರಗ್ಸ್ ಹಾಗೂ ಮಾದಕ ವಸ್ತುಗಳಿಂದ ದೂರ ಇರಬೇಕು ಎಂದು ಹಿರಿಯ ನ್ಯಾಯವಾದಿ ಎಂ.ಬಿ.ಜಿರಲಿ ತಿಳಿಸಿದರು.

ಬೆಳಗಾವಿ ಬಿ.ವಿ. ಬೆಲ್ಲದ ಕಾನೂನು ಮಹಾವಿದ್ಯಾಲಯದಲ್ಲಿ ಬುಧವಾರ ಎಬಿವಿಪಿ ಉತ್ತರ ಕರ್ನಾಟಕ ವಲಯದ ಸಹಯೋಗದಲ್ಲಿ ಏರ್ಪಡಿಸಲಾಗಿದ್ದ ವ್ಯಸನಮುಕ್ತ ಕ್ಯಾಂಪಸ್ ವಿಷಯದ ವಿಶೇಷ ಉಪನ್ಯಾಸದಲ್ಲಿ ಅವರು ಮಾತನಾಡಿದರು.
ಎಬಿವಿಪಿ ರಾಷ್ಟ್ರೀಯ ಕಾರ್ಯಕಾರಿಣಿ ಸದಸ್ಯ ಡಾ.ಎಚ್.ಎಂ. ಚನ್ನಪ್ಪಗೋಳ ಮಾತನಾಡಿ, ರಾಷ್ಟ್ರ ನಿರ್ಮಾಣದಲ್ಲಿ ಯುವಕರ ಪಾತ್ರ ಮಹತ್ವದ್ದಾಗಿದೆ. ಈ ನಿಟ್ಟಿನಲ್ಲಿ ಯುವಕರು ಉತ್ತನ ಸಮಾಜ ನಿರ್ಮಾಣದತ್ತ ತಮ್ಮ ಪಾತ್ರವನ್ನು ನಿಭಾಯಿಸಬೇಕು ಎಂದರು.
ಪ್ರಾಚಾರ್ಯೆ ಡಾ. ಜ್ಯೋತಿ ಹಿರೇಮಠ ಅಧ್ಯಕ್ಷತೆ ವಹಿಸಿದ್ದರು.

ಸಹಾಯಕ ಪ್ರಾಧ್ಯಾಪಕಿ ಡಾ.ಸುಪ್ರಿಯಾ ಎಂ.ಸ್ವಾಮಿ ಸ್ವಾಗತಿಸಿದರು. ರೋಹಿತ್ ಉಮ್ನಾಬಾದಿಮಠ ಪ್ರಾಸ್ತಾವಿಕವಾಗಿ ಮಾತನಾಡಿದರು. ಮಲ್ಲಿಕಾರ್ಜುನ ಪೂಜಾರಿ ವಂದಿಸಿದರು.