ಬೆಳಗಾವಿ: ಭಾರತದಲ್ಲಿ ರಾಜಕೀಯ ಸಮಾನತೆ ಜೊತೆಗೆ ಆರ್ಥಿಕ ಹಾಗೂ ಸಾಮಾಜಿಕ ಸಮಾನತೆಗಳು ಪೂರ್ಣ ಪ್ರಮಾಣದಲ್ಲಿ ಜಾರಿಗೊಂಡಾಗ ಮಾತ್ರ ಡಾ. ಬಿ. ಆರ್. ಅಂಬೇಡ್ಕರ್ ಅವರ ಕನಸು ನನಸಾಗುವುದು ಎಂದು ಡಾ. ಸಾವುಕಾರ ಕಾಂಬಳೆ ಅಭಿಪ್ರಾಯಪಟ್ಟಿದ್ದಾರೆ.

ನಗರದ ಸಂಗೊಳ್ಳಿ ರಾಯಣ್ಣ ಪ್ರಥಮ ದರ್ಜೆ ಘಟಕ ಮಹಾವಿದ್ಯಾಲಯದಲ್ಲಿ ಶುಕ್ರವಾರ ರಾಜ್ಯಶಾಸ್ತ್ರ ವಿಭಾಗದ ವತಿಯಿಂದ ಹಮ್ಮಿಕೊಂಡ ಡಾ. ಬಿಆರ್ ಅಂಬೇಡ್ಕರ್ ಅವರ ಪರಿನಿರ್ವಾಣ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಮಾತನಾಡಿದರು. ಡಾ. ಬಿ ಆರ್ ಅಂಬೇಡ್ಕರ್ ಅವರು ಕೇವಲ ದಲಿತರಿಗೆ ಮೀಸಲಾದ ನಾಯಕರಲ್ಲ ಅವರೊಬ್ಬ ರಾಷ್ಟ್ರ ನಾಯಕರು ಸಮಾಜದ ಎಲ್ಲಾ ವರ್ಗಗಳಿಗೆ ಸಮಾನತೆಯನ್ನು ಕಲ್ಪಿಸಿದ ಧೀಮಂತ ವ್ಯಕ್ತಿ ಎಂದು ಅಂಬೇಡ್ಕರ್ ಅವರ ಅಂತಿಮ ದಿನಗಳು ಹಾಗೂ ಅವರ ಕನಸುಗಳನ್ನು ಕನಸುಗಳ ಬಗ್ಗೆ ಮಾತನಾಡುತ್ತಾ ಅವರ ವಿಚಾರಧಾರೆಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳೋಣ ಎಂದರು.

ಅಧ್ಯಕ್ಷತೆ ವಹಿಸಿದ ಅರ್ಥಶಾಸ್ತ್ರ ಪ್ರಾಧ್ಯಾಪಕ ಡಾ. ಅರ್ಜುನ್ ಜಂಬಗಿ ಅವರು ಡಾ. ಬಿ ಆರ್ ಅಂಬೇಡ್ಕರ್ ಅವರ ಕೊಡುಗೆಯನ್ನು ಸ್ಮರಿಸಿದರು.

ರಾಜ್ಯಶಾಸ್ತ್ರ ವಿಭಾಗದ ಮುಖ್ಯಸ್ಥ ಡಾ. ಮಲ್ಲೇಶ್ ದೊಡ್ಡಲಕ್ಕನ್ನವರ ನಿರೂಪಿಸಿದರು. ಡಾ. ಶ್ರೀಕಾಂತ್ ಮುಚ್ಚಂಡಿ ಸ್ವಾಗತಿಸಿ ಶಿವಾನಂದ್ ಕಾಂಬಳೆ ವಂದಿಸಿದರು. ಕಾಲೇಜಿನ ಎಲ್ಲಾ ಬೋಧಕ ಬೋಧಕೇತರ ಸಿಬ್ಬಂದಿಗಳು ಹಾಗೂ ವಿದ್ಯಾರ್ಥಿಗಳು ಭಾಗಿಯಾಗಿದ್ದರು.