ಬೆಳಗಾವಿ: ಇಲ್ಲಿನ ಹಿಂಡಲಗಾ ಕೇಂದ್ರ ಕಾರಾಗೃಹದಲ್ಲಿ ಕೈದಿಯೊಬ್ಬ ಚಿಕಿತ್ಸೆಗೆ ಸ್ಪಂದಿಸದೆ ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟಿದ್ದಾನೆ.

ಕೆ.ಎಂ.ಇಸ್ಮಾಯಿಲ್ ಮೃತ ಕೈದಿ. ಭೂಗತ ಪಾತಕಿ ಬನ್ನಂಜೆ ರಾಜಾನ ಸಹಚರನಾಗಿದ್ದ ಇಸ್ಮಾಯಿಲ್‌ನು ಅಂಕೋಲಾದ ಉದ್ಯಮಿ ಆ‌ರ್.ಎನ್.ನಾಯಕ ಕೊಲೆ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆ ಎದುರಿಸುತ್ತಿದ್ದ. ಹೃದಯ ಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದ ಆತನಿಗೆ ಚಿಕಿತ್ಸೆ ಕೊಡಿಸಲಾಗುತ್ತಿತ್ತು. ಈಗ ಮತ್ತೆ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿತ್ತು ಎಂದು ಕಾರಾಗೃಹದ ಅಧಿಕಾರಿಗಳು ತಿಳಿಸಿದ್ದಾರೆ.