ಬೆಳಗಾವಿ: ಜೈನ ಸಮಾಜದ ವಿವಿಧ ಬೇಡಿಕೆ ಈಡೇರಿಸುವಂತೆ ಡಿ.12 ರಂದು ಸುವರ್ಣ ವಿಧಾನಸೌಧದ ಮುಂಭಾಗದಲ್ಲಿ ಪ್ರತಿಭಟನೆ ನಡೆಸಲಾಗುವುದು ಎಂದು ಸಮಸ್ತ ಜೈನ ಅಲ್ಪಸಂಖ್ಯಾತರ ಹೋರಾಟದ ಸಮಿತ ಮುಖಂಡ ವಿನೋದ್ ದೊಡ್ಡಣ್ಣವರ ಹೇಳಿದರು.

ಭಾನುವಾರ ಬೆಳಗಾವಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು. ರಾಜ್ಯ ಸರಕಾರ ಜೈನ ಅಭಿವೃದ್ಧಿಗಾಗಿ ನಿಗಮ ಸ್ಥಾಪನೆ ಮಾಡಿ ಪ್ರತಿ ವರ್ಷ 200 ಕೋಟಿ ಜೈನ ನಿಗಮ ಅಭಿವೃದ್ಧಿಗೆ ಅನುದಾನ ನೀಡಬೇಕು. ಕರ್ನಾಟಕ ಸರಕಾರದ 414 ಅಲ್ಪಸಂಖ್ಯಾತರ ವಿದ್ಯಾರ್ಥಿ ನಿಲಯಗಳಲ್ಲಿ ಪ್ರತಿ ಜಿಲ್ಲೆಯಲ್ಲಿ ಒಂದು ಮತ್ತು ಜೈನ ಜನಸಂಖ್ಯೆ ಹೆಚ್ಚು ಇರುವ ಜಿಲ್ಲೆಗಳಲ್ಲಿ ಎರಡು ವಿದ್ಯಾರ್ಥಿ ‌ನಿಲಯಗಳನ್ನು‌ ಮೀಸಲಿಡಬೇಕೆಂದು ಆಗ್ರಹಿಸಲಾಗುವುದು ಎಂದರು.
ಇಲ್ಲಿಯವರೆಗೆ ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ ಅಧ್ಯಕ್ಷ ಸ್ಥಾನ ಜೈನ ಸಮಾಜಕ್ಕೆ ಸಿಕ್ಕಿಲ್ಲ. ಹೀಗಾಗಿ ಅಧ್ಯಕ್ಷ ಸ್ಥಾನ ಸಮಾಜಕ್ಕೆ ಕೊಡಬೇಕು ಹಾಗೂ ಇನ್ನು ನಿಗಮದಲ್ಲಿ ಜೈನ ನಿರ್ದೇಶಕರ ಆಯ್ಕೆ ಆಗಿಲ್ಲ. ತಕ್ಷಣ ಇಬ್ಬರು ಜೈನ ನಿರ್ದೇಶಕರನ್ನು ಆಯ್ಕೆ ಮಾಡಬೇಕೆಂದರು.
ಅಲ್ಪಸಂಖ್ಯಾತರ ವಿಭಾಗದಲ್ಲಿ 5% ಜೈನ ಸಮಾಜಕ್ಕೆ ಮೀಸಲಾತಿ ಇದೆ ಅದನ್ನು ಹೆಚ್ಚಿಸಿ 20% ಮಾಡಬೇಕು. ಪ್ರಾಚೀನ ಜೈನ ಬಸದಿ ಮತ್ತು ಬಸದಿಗಳ ಆಸ್ತಿಯ ಸಂರಕ್ಷಣೆಗಾಗಿ ಕಠೋರ ಕಾನೂನು ತರಬೇಕು ಮತ್ತು ಎಲ್ಲಾ ಪ್ರಾಚೀನ ಬಸದಿ ಮತ್ತು ಆಸ್ತಿಗಳ ಸರ್ವೇ ಮಾಡಿ ಅತಿಕ್ರಮಣ ಮಾಡಿದ್ದಾರೆ. ಅವರ ವಿರುದ್ಧ ಕ್ರಮ ಜರುಗಸಬೇಕೆಂದರು.
ಕರ್ನಾಟಕ ಸರಕಾರದಿಂದ ನೀಡಿರುವ ಶಿಕ್ಷಣ ಸಂಸ್ಥೆಗಳನ್ನು ಅಲ್ಪಸಂಖ್ಯಾತರ ಸಂಸ್ಥೆಯೆಂದು ನೀಡಿರುತ್ತಾರೆ. ಆ ಸಂಸ್ಥೆಗಳಲ್ಲಿ ಶೇಕಡಾ 50% ಕ್ಕಿಂತ ಕಡಿಮೆ ಅಲ್ಪಸಂಖ್ಯಾತ ವಿದ್ಯಾರ್ಥಿಗಳಿರುವ ಸಂಸ್ಥೆಗಳನ್ನು ಸಾಮಾನ್ಯ ಸಂಸ್ಥೆ ಎಂದು ನಿಯಮ ಮಾಡುವುದನ್ನು ಹಿಂಪಡೆಯುವುದು ಹಾಗೂ ಜೈನ ಸಮಾಜದವರು ಸಸ್ಯಹಾರಿಗಳಾಗಿರುವುದರಿಂದ ಜೈನ ಅಲ್ಪಸಂಖ್ಯಾತ ಸಂಸ್ಥೆಗಳಲ್ಲಿ ಮೊಟ್ಟೆ ವಿತರಣೆ ಮಾಡುವುದನ್ನು ನಿಲ್ಲಿಸುವುದು. ಇದಕ್ಕೆ ನಮ್ಮ ಸಮಾಜದಿಂದ ಸಂಪೂರ್ಣ ವಿರೋಧವಿದೆ ಎಂದರು.
ಅಭಯ ಅವಲಕ್ಕಿ, ವರ್ಧಮಾನ ಮಾರ್ಗನಕೊಪ್ಪ ಉಪಸ್ಥಿತರಿದ್ದರು.