ಮಂಗಳೂರು: ಬಜಪೆ ಧರ್ಮಸ್ಥಳ ಯೋಜನಾ ಕಚೇರಿ ವ್ಯಾಪ್ತಿಯ ಕಾವೂರು ವಲಯದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಫಲಾನುಭವಿಗಳಿಗೆ ಲಾಭಾಂಶ ವಿತರಣಾ ಕಾರ್ಯಕ್ರಮವನ್ನು ಮಳವೂರು ಶಾಲೆಯಲ್ಲಿ ವಿತರಿಸಲಾಯಿತು.

ಕಾರ್ಯಕ್ರಮದಲ್ಲಿ ಫಲನುಭವಿಗಳಿಗೆ ತಾಲೂಕಿನ ಯೋಜನಾಧಿಕಾರಿ ಗಿರೀಶ್ ಅವರು, ಸದಸ್ಯರಿಗೆ ಸವಿಸ್ತಾರವಾಗಿ ಮಾಹಿತಿ ನೀಡಿದರು ಕಾರ್ಯಕ್ರಮದಲ್ಲಿ ಪತ್ರಕರ್ತ ಎ.ಕೆ.ಉದಯಶಂಕರ ಮಾತನಾಡಿ, ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಇಡೀ ದೇಶಕ್ಕೆ ಮಾದರಿಯಾಗಿದೆ.  ಜನತೆಯ ಬದುಕಿಗೆ ದಾರಿದೀಪವಾಗಿದೆ ಎಂದರು.

ತಾಲೂಕು ಕೃಷಿ ಮೇಲ್ವಿಚಾರಕ ಐತಪ್ಪ , ವಲಯ ಮೇಲ್ವಿಚಾರಕ ಅಭಿಮಾನ್ ಜೈನ್, ಕೇಂದ್ರ ಒಕ್ಕೂಟ ಅಧ್ಯಕ್ಷ ರಾಜೇಶ್ ಶೆಟ್ಟಿ, ಸೇವಾಪ್ರತಿನಿಧಿ ಪ್ರಭಾವತಿ ಹಾಗೂ ಪದಾಧಿಕಾರಿಗಳು ಮತ್ತು ಸಂಘದ ಸದಸ್ಯರು ಉಪಸ್ಥಿತರಿದ್ದರು.