ಸುಬ್ರಹ್ಮಣ್ಯ: ಕುಕ್ಕೆ ಸುಬ್ರಹ್ಮಣ್ಯ ಸಮೀಪದ ಕುಮಾರಪರ್ವತದ ತುತ್ತ ತುದಿಯಲ್ಲಿರುವ ಕುಮಾರ ಪಾದಕ್ಕೆ ಮತ್ತು ಸಮೀಪದಲ್ಲಿರುವ ವಾಸುಕಿಗೆ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ವತಿಯಿಂದ ಶನಿವಾರ ಪೂಜೆ ನೆರವೇರಿಸಲಾಯಿತು.

ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಪ್ರಧಾನ ಅರ್ಚಕ ಸೀತಾರಾಮ ಯಡಪಡಿತ್ತಾಯ ಅವರು ಪಂಚಾಮೃತ ಅಭಿಷೇಕ ನೆರವೇರಿಸಿ ಪೂಜೆ ನೆರವೇರಿಸಿದರು. ಬಳಿಕ ಭಕ್ತರಿಗೆ ಪ್ರಸಾದ ನೀಡಲಾಯಿತು.

ಕುಕ್ಕೆಯಿಂದ ಸುಮಾರು 12 ಕಿ.ಮೀ. ದೂರವಿರುವ ಪರ್ವತ ಏರಿ ಪೂಜೆಯಲ್ಲಿ ಭಾಗವಹಿಸಿದ ಭಕ್ತರು ಪ್ರಸಾದ ಸ್ವೀಕರಿಸಿದರು. ದೇವಸ್ಥಾನದ ಕಾರ್ಯನಿರ್ವಹಣಾಧಿಕಾರಿ ಅರವಿಂದ ಅಯ್ಯಪ್ಪ ಸುತಗುಂಡಿ ಭಾಗವಹಿಸಿದ್ದರು.