ಬೆಳಗಾವಿ: ಬೆಳಗಾವಿಯಲ್ಲಿ ರಾಷ್ಟ್ರೀಯ ಕಾಂಗ್ರೆಸ್ 39ನೇ ಅಧಿವೇಶನದ ಶತಮಾನೋತ್ಸವ ಕಾರ್ಯಕ್ರಮ ನಡೆಯಲಿದೆ. ಈ ಐತಿಹಾಸಿಕ ಕಾರ್ಯಕ್ರಮಕ್ಕೆ ಬೆಳಗಾವಿ ನಗರ 26, 27ರಂದು ಸಾಕ್ಷಿಯಾಗಲಿದೆ.

ಅಮೆರಿಕದ ಮಾಜಿ ಅಧ್ಯಕ್ಷ ಬರಾಕ್ ಒಬಾಮಾ ಅವರನ್ನು ಕರೆತರಲು ಕಾಂಗ್ರೆಸ್ ಪಕ್ಷ ಎರಡು ತಿಂಗಳ ಹಿಂದೆ ಪ್ರಯತ್ನ ನಡೆಸಿತ್ತು. ಆದರೆ ಅವರು ಬರುತ್ತಿಲ್ಲ.

ಈ ಸಂದರ್ಭದಲ್ಲಿ ಪ್ರಥಮ ಬಾರಿಗೆ ಗಾಂಧಿ ಕುಟುಂಬ ಒಟ್ಟಾಗಿ ಬೆಳಗಾವಿ ಆಗಮಿಸಲಿದೆ. ಡಿ. 26 ರಂದು ಸೋನಿಯಾ ಗಾಂಧಿ, ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಬೆಳಗಾವಿಯಲ್ಲಿ ಪ್ರಥಮ ಬಾರಿಗೆ ವಾಸ್ತವ್ಯ ಹೂಡಲಿದ್ದಾರೆ.

ಸಮಾವೇಶದ ಶತಮಾನೋತ್ಸವ ಕಾರ್ಯಕ್ರಮದಲ್ಲಿ ಕಾಂಗ್ರೆಸ್ ಕಾರ್ಯಕಾರಿ ಮಂಡಳಿ, ರಾಷ್ಟ್ರೀಯ ನಾಯಕರು, ಮುಖ್ಯಮಂತ್ರಿಗಳು, ಸಚಿವರು, ಕಾಂಗ್ರೆಸ್ ಆಡಳಿತವಿರುವ ರಾಜ್ಯಗಳ ಪದಾಧಿಕಾರಿಗಳು ಭಾಗವಹಿಸಲಿದ್ದಾರೆ. ಇದರಲ್ಲಿ ರಾಜ್ಯಸಭೆ, ಲೋಕಸಭೆಯಲ್ಲಿ ಕಾಂಗ್ರೆಸ್‌ನ ಹಾಗೂ ಮಿತ್ರ ಪಕ್ಷಗಳ 150 ಸಂಸದರು ಆಗಮಿಸಲಿದ್ದಾರೆ.

ಮಹಾತ್ಮಾ ಗಾಂಧಿ ಅಧ್ಯಕ್ಷತೆಯಲ್ಲಿ ನಡೆದ ರಾಷ್ಟ್ರೀಯ ಕಾಂಗ್ರೆಸ್ ಅಧಿವೇಶನದ ಶತಮಾನೋತ್ಸವಕ್ಕೆ ಭಾರೀ ಸಿದ್ಧತೆ ನಡೆದಿದೆ. ಬೆಳಗಾವಿಯಲ್ಲಿ ಪ್ರಥಮ ಬಾರಿಗೆ ಕಾರ್ಯಕರ್ತರಲ್ಲಿ ಗಾಂಧಿ ಕುಟುಂಬ ಈ ಕಾರ್ಯಕ್ರಮಕ್ಕೆ ಆಗಮಿಸುತ್ತಿರುವುದು ಉತ್ಸಾಹಕ್ಕೆ ಕಾರಣವಾಗಿದೆ.