ಬೆಂಗಳೂರು: ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ವಿದ್ಯಾರ್ಥಿಗಳ ಶೈಕ್ಷಣಿಕ ಪ್ರವಾಸ ಸಂಬಂಧ ಕನಿಷ್ಠ ಪಕ್ಷ 15 ದಿನಗಳ ಮುಂಚಿತವಾಗಿ ಪ್ರಾಂಶುಪಾಲರು ಪ್ರಸ್ತಾವನೆ ಕಳುಹಿಸ ಬೇಕೆಂದು ಕಾಲೇಜು ಶಿಕ್ಷಣ ಇಲಾಖೆ ಸೂಚಿಸಿದ್ದಾರೆ.

ಈ ಸಂಬಂಧ ಸುತ್ತೋಲೆ ಹೊರಡಿಸಿರುವ ಇಲಾಖೆ ನಿರ್ದೇಶಕರು, ಕಾಲೇಜು ಶಿಕ್ಷಣ ಇಲಾಖೆ, ಶೈಕ್ಷಣಿಕ ಪ್ರವಾ ಸಕ್ಕೆ ಅನುಮತಿ ಕೋರಿ ಅತಿ ಕಡಿಮೆ ಅವಧಿಯಲ್ಲಿ ಅಥವಾ ಕೊನೇ ಕ್ಷಣದಲ್ಲಿ ಇಲಾಖೆಯನ್ನು ಸಂಪರ್ಕಿಸುವ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಈ ನಿರ್ಧಾರ ಕೈಗೊಳ್ಳ ಲಾಗಿದೆ ಎಂದು ತಿಳಿಸಿದ್ದಾರೆ.

ಪ್ರಾಂಶುಪಾಲರು ತಮ್ಮ ಕಾಲೇಜಿನ ಪ್ರಸ್ತಾವನೆಗಳನ್ನು ಪ್ರವಾಸಕ್ಕೆ ಕೆಲವೇ ದಿನ ಇರುವಾಗ ಕಳುಹಿಸುತ್ತಿರುವುದರಿಂದ ಕಚೇರಿ ಕಾರ್ಯಕ್ಕೆ ಅಡಚಣೆಯಾಗುತ್ತಿದೆ. ಈ ಹಿನ್ನೆಲೆಯಲ್ಲಿ ಇನ್ನು ಮುಂದೆ 15 ದಿನ ಮುಂಚಿತವಾಗಿ ಪ್ರಸ್ತಾವನೆ ಸಲ್ಲಿಸ ಬೇಕು. ತಪ್ಪಿದರೆ ಅಂಥ ಪ್ರಸ್ತಾವನೆಗಳನ್ನು ಪರಿಗಣಿಸುವುದಿಲ್ಲ. ಮುಂದಿನ ಆಗುಹೋಗುಗಳಿಗೆ ಪ್ರಾಂಶುಪಾಲರೇ ನೇರ ಹೊಣೆ ಆಗುತ್ತಾರೆ ಎಂದು ಎಚ್ಚರಿಕೆ ನೀಡಲಾಗಿದೆ.