ಬೆಳಗಾವಿ: ಗಾಂಧಿ‌ ಭಾರತ ಕಾರ್ಯಕ್ರಮ ಹಿನ್ನೆಲೆಯಲ್ಲಿ ಬೆಳಗಾವಿ ನಗರ ಮತ್ತು ಗ್ರಾಮೀಣ ವಲಯದ ಸರಕಾರಿ, ಅನುದಾನಿತ‌ ಹಾಗೂ ಅನುದಾನರಹಿತ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಿಗೆ ಡಿ.26 ಹಾಗೂ 27 ರಂದು ರಜೆ ಘೋಷಿಸಿ ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಆದೇಶ ಹೊರಡಿಸಿದ್ದಾರೆ.

ನಾಳೆಯಿಂದ ಎರಡು ದಿನಗಳ ಕಾಲ ಗಾಂಧಿ‌ ಭಾರತ ಕಾರ್ಯಕ್ರಮ ಯೋಜನೆ ಮಾಡಲಾಗಿದೆ. ಸಮವೇಶ ಹಿನ್ನೆಲೆಯಲ್ಲಿ ಬೆಳಗಾವಿ ನಗರ ಗ್ರಾಮೀಣ ಪ್ರದೇಶಗಳ ಸರಕಾರಿ, ಅನುದಾನಿತ‌ ಹಾಗೂ ಅನುದಾನರಹಿತ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಿಗೆ ಹಾಗೂ ಬೆಳಗಾವಿ ನಗರ ಮತ್ತು ಗ್ರಾಮೀಣ ಯೋಜನೆಯ ಅಂಗನವಾಡಿ ಕೇಂದ್ರಗಳಿಗೂ ರಜೆ ಘೋಷಣೆ ಮಾಡಲಾಗಿದೆ.