ಮುಂಬೈ:
ದೇಶದ ಅತಿ ಉದ್ದದ ಸಮುದ್ರ ಸೇತುವೆಯಾದ ಮುಂಬೈ ಟ್ರಾನ್ಸ್ ಹಾರ್ಬರ್ ಲಿಂಕ್(MTHL) ಅನ್ನು ಜನವರಿ 12 ರಂದು ಪ್ರಧಾನಿ ನರೇಂದ್ರ ಮೋದಿ ಲೋಕಾರ್ಪಣೆ ಮಾಡಲಿದ್ದಾರೆ ಎಂದು ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ ಶಿಂಧೆ ಹೇಳಿದ್ದಾರೆ.

ಮುಂಬೈನ ಸೆವ್ರಿ ಮತ್ತು ರಾಯಗಡ ಜಿಲ್ಲೆಯ ನ್ಹವಾ ಶೇವಾ ಪ್ರದೇಶದ ನಡುವಿನ 21.8 ಕಿಲೋಮೀಟರ್ ಉದ್ದದ ಸೇತುವೆಯು ಪ್ರಸ್ತುತ ಎರಡು ಗಂಟೆಗಳಿಂದ ಸುಮಾರು 15-20 ನಿಮಿಷಗಳಿಗೆ ಪ್ರಯಾಣದ ಅವಧಿಯನ್ನು ಕಡಿಮೆ ಮಾಡುತ್ತದೆ ಎಂದು ಹೇಳಿದರು.

ಪ್ರಧಾನಿ ನರೇಂದ್ರ ಮೋದಿ ಅವರು ಜನವರಿ 12 ರಂದು (ಶುಕ್ರವಾರ) MTHL ಅನ್ನು ಉದ್ಘಾಟಿಸಲಿದ್ದಾರೆ. ಈ ಸೇತುವೆಯಿಂದ ಆರ್ಥಿಕ ಅಭಿವೃದ್ಧಿಯಾಗಲಿದೆ ಎಂದು ತಿಳಿಸಿದರು.