ಕಾಪು (ಪಡುಬಿದ್ರಿ): ಇಲ್ಲಿನ ಶ್ರೀಹೊಸ ಮಾರಿಗುಡಿ ದೇವಸ್ಥಾನದಲ್ಲಿ ಫೆ. 25ರಿಂದ ಮಾರ್ಚ್ 5ರವರೆಗೆ ನಡೆಯುವ ಪ್ರತಿಷ್ಠಾ ಬ್ರಹ್ಮಕಲಶೋತ್ಸವಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಮುಜರಾಯಿ ಇಲಾಖೆ ಸಚಿವ ರಾಮಲಿಂಗಾ ರೆಡ್ಡಿ ಅವರಿಗೆ ಆಹ್ವಾನ ನೀಡಲಾಯಿತು.

ಶಾಸಕ ಮತ್ತು ದೇವಸ್ಥಾನದ ಅಭಿವೃದ್ಧಿ ಸಮಿತಿ ಕಾರ್ಯಾಧ್ಯಕ್ಷ ಗುರ್ಮೆ ಸುರೇಶ್ ಶೆಟ್ಟಿ ನೇತೃತ್ವದಲ್ಲಿ ಸಚಿವರನ್ನು ಭೇಟಿ ಮಾಡಲಾಗಿದ್ದು, ದೇವಸ್ಥಾನದ ಜೀರ್ಣೋದ್ಧಾರ-ಅಭಿವೃದ್ದಿಗೆ ಇಲಾಖೆ ಮತ್ತು ಸರ್ಕಾರದಿಂದ ಅನುದಾನ ಒದಗಿಸುವಂತೆ ಮನವಿ ಮಾಡಲಾಯಿತು.

ದೇವಸ್ಥಾನದ ಅಭಿವೃದ್ಧಿ ಸಮಿತಿ ಅಧ್ಯಕ್ಷ ಕೆ. ವಾಸುದೇವ ಶೆಟ್ಟಿ, ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ನಡಿಕೆರೆ ರತ್ನಾಕರ ಶೆಟ್ಟಿ, ಅಭಿವೃದ್ಧಿ ಸಮಿತಿ ಗೌರವಾಧ್ಯಕ್ಷ ಮತ್ತು ಮಾಜಿ ಶಾಸಕ ಲಾಲಾಜಿ ಆರ್. ಮೆಂಡನ್, ಸಮಿತಿ ಉಪಾಧ್ಯಕ್ಷ ಡಾ.ದೇವಿಪ್ರಸಾದ್‌ ಶೆಟ್ಟಿ ಬೆಳಪು ಇದ್ದರು.