ಬೆಳಗಾವಿ : ಬೆಳಗಾವಿ ವಿಧಾನ ಮಂಡಲದ ಅಧಿವೇಶನದ ವೇಳೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ ಅವರನ್ನು ನಿಂದಿಸಿದ ಪ್ರಕರಣಕ್ಕೆ ಸಂಬಂಧಿಸಿ ಇದೀಗ ಮಾಜಿ ಸಚಿವ ಸಿ.ಟಿ.ರವಿ ಅವರಿಗೆ ಜೀವ ಬೆದರಿಕೆ ಪತ್ರ ಬಂದಿದ್ದು ಈ ಬಗ್ಗೆ ಅವರು ಚಿಕ್ಕಮಗಳೂರು ಬಸವನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣದ ಕುರಿತು ದೂರು ದಾಖಲು ಮಾಡಿದ್ದಾರೆ.

ಚಿಕ್ಕಮಗಳೂರಿನಿಂದ ಬೆಳಗಾವಿಗೆ ಬಂದು ಅಭಿನೇತ್ರಿ ಕ್ಷಮೆ ಕೇಳಬೇಕು, ಇಲ್ಲದಿದ್ದರೆ ನಿಮ್ಮ ಮನೆಗೆ ನುಗ್ಗಿ ಕೈಕಾಲು ಮುರಿಯುತ್ತೇವೆ. ನಿನ್ನ ಪ್ರಾಣ ತೆಗೆಯುತ್ತೇವೆ. ನಿನ್ನ ಮಗನ ಸಾಯಿಸುತ್ತೇವೆಂದು ಬೆದರಿಕೆ ಹಾಕಿದ್ದಾರೆ ಎಂದು ಈ ಅನಾಮಧೇಯ ಪತ್ರದಲ್ಲಿ ವಿವರಿಸಲಾಗಿದೆ ಎಂದು ವರದಿಯಾಗಿದೆ.