ಬೆಳಗಾವಿ : ಸ್ವಾಮಿ ವಿವೇಕಾನಂದರ ಜಯಂತಿ ನಿಮಿತ್ತ ಭಾರತೀಯ ಜನತಾ ಪಾರ್ಟಿ ಯುವ ಮೋರ್ಚಾ ಬೆಳಗಾವಿ ಗ್ರಾಮಾಂತರ ಜಿಲ್ಲೆಯ ವತಿಯಿಂದ ನಗರದಲ್ಲಿರುವ ರಾಮಕೃಷ್ಣ ಮಿಷನ್ ಆಶ್ರಮದ ಹತ್ತಿರ “ವಿವೇಕ ನಡಿಗೆ” ಕಾರ್ಯಕ್ರಮಕ್ಕೆ ಭಾರತೀಯ ಜನತಾ ಪಾರ್ಟಿ ಜಿಲ್ಲಾಧ್ಯಕ್ಷ ಸುಭಾಷ್ ಪಾಟೀಲ್ ಚಾಲನೆ ನೀಡಿದರು.

ಅವರು ಮಾತನಾಡಿ ವಿವೇಕಾನಂದರ ಕುರಿತು ಯಾವುದೇ ಭಾಷಣವೂ ಭಾರತೀಯ ಸಮಾಜಕ್ಕೆ ಅವರ ಅಪಾರ ಕೊಡುಗೆಗಳನ್ನು ಉಲ್ಲೇಖಿಸದೆ ಪೂರ್ಣವಾಗುವುದಿಲ್ಲ ಸ್ವಾಮಿ ವಿವೇಕಾನಂದರು ತಮ್ಮ ಜೀವನವನ್ನು ಸಮಾಜದ ಉನ್ನತಿಗಾಗಿ ಮುಡುಪಾಗಿಟ್ಟಿದ್ದರು. ಸ್ವಾಮಿ ವಿವೇಕಾನಂದರು ಅಮೆರಿಕಕ್ಕೆ ಭೇಟಿ ನೀಡಿದ ಮೊದಲ ಭಾರತೀಯ ಎಂದು ಕರೆಯಲ್ಪಟ್ಟರು ಅವರು 1893ರಲ್ಲಿ ಸಂಸತ್ತನ್ನು ಉದ್ದೇಶಿಸಿ ಮಾತನಾಡಿದರು ಸ್ಪೂರ್ತಿದಾಯಕ ಜೀವನವನ್ನು ನಡೆಸಿ ಮಾನವೀಯತೆ ಮತ್ತು ಸಮಾಜದ ಉನ್ನತಿಗಾಗಿ ಸೇವೆ ಸಲ್ಲಿಸಿದರು ನಾವು ಅವರ ಬೋಧನೆಗಳನ್ನು ನಮ್ಮ ಜೀವನದಲ್ಲಿ ಅಳವಡಿಸಿಕೊಂಡು ಉತ್ತಮ ಮಾನವ ಹಾಗೂ ನಾಗರಿಕರಾಗಬೇಕೆಂದು ಹೇಳಿದರು.
ಮಾಜಿ ಶಾಸಕರಾದ ರಾಜಶೇಖರ ಶೀಲವಂತರ, ಸಂಜಯ್ ಪಾಟೀಲ್, ಮಹಾಂತೇಶ ದೊಡಗೌಡರ್, ಜಗದೀಶ್ ಮೆಟಗುಡ್ಡ, ರಾಜ್ಯ ಯುವ ಮೋರ್ಚಾ ಉಪಾಧ್ಯಕ್ಷ ಈರಣ್ಣ ಅಂಗಡಿ, ಜಿಲ್ಲಾ ಯುವ ಮೋರ್ಚಾ ಅಧ್ಯಕ್ಷ ಮಹಾಂತೇಶ ಚಿನ್ನಪ್ಪಗೌಡ್ರ, ಪ್ರಧಾನ ಕಾರ್ಯದರ್ಶಿಗಳಾದ ಸಂದೀಪ್ ದೇಶಪಾಂಡೆ, ಧನಶ್ರೀ ದೇಸಾಯಿ, ಆನಂದ ಅತ್ತುಗೋಳ, ಗುರು ಹೀರೆಮಠ ಹಾಗೂ ಮಂಡಳದ ಅಧ್ಯಕ್ಷರು, ರಾಜ್ಯ, ಜಿಲ್ಲಾ ಹಾಗೂ ಮಂಡಲದ ಪ್ರಮುಖ ಪದಾಧಿಕಾರಿಗಳು, ಮುಖಂಡರು ಕಾರ್ಯಕರ್ತರು ಉಪಸ್ಥಿತರಿದ್ದರು.