ಕೋಟ : ಸಾಲಿಗ್ರಾಮ ಪಾರಂಪಳ್ಳಿ ಪಡುಕರೆ ಶನೈಶ್ವರ ದೇವಸ್ಥಾನದ ನೂತನ ಶಿಲಾಮಯ ದೇವಸ್ಥಾನ ನಿರ್ಮಾಣದ ಕೆಸರುಕಲ್ಲು ಮುಹೂರ್ತ, ಭೂಮಿ ಪೂಜೆ ಈಚೆಗೆ ಧಾರ್ಮಿಕ ವಿಧಿವಿಧಾನಗಳ ಮೂಲಕ ನೆರವೇರಿತು.

ಸಂಸದ ಕೋಟ ಶ್ರೀನಿವಾಸ ಪೂಜಾರಿ ಶಿಲಾನ್ಯಾಸ ನೆರವೇರಿಸಿದರು. ಸಾಲಿಗ್ರಾಮ ಗುರುನರಸಿಂಹ ದೇವಸ್ಥಾನದ ಪ್ರಧಾನ ಅರ್ಚಕ ಜನಾರ್ದನ ಅಡಿಗ ಧಾರ್ಮಿಕ ವಿಧಿ ವಿಧಾನ ನೆರವೇರಿಸಿದರು.

ದೇವಸ್ಥಾನ ಜೀರ್ಣೋದ್ದಾರ ಸಮಿತಿ ಗೌರವಾಧ್ಯಕ್ಷ ಉದ್ಯಮಿ ಆನಂದ ಸಿ. ಕುಂದರ್, ಆಡಳಿತ ಮಂಡಳಿ ಪ್ರಧಾನ ಕಾರ್ಯದರ್ಶಿ ಸತೀಶ ಮೆಂಡನ್, ಸಾಸ್ತಾನ ಬ್ರಹ್ಮ ಬೈದರ್ಕಳ ಬಿಲ್ಲವ ಸಂಘದ ಅಧ್ಯಕ್ಷ ಎಂ.ಸಿ. ಚಂದ್ರ ಪೂಜಾರಿ, ಕಾರ್ಯದರ್ಶಿ ಐರೋಡಿ ವಿಠಲ ಪೂಜಾರಿ, ಕೋಟ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಶಂಕರ ಕುಂದರ್, ಕೋಟತಟ್ಟು ಗ್ರಾಮ ಪಂಚಾಯಿತಿ ಸದಸ್ಯ ರವೀಂದ್ರ ತಿಂಗಳಾಯ, ರತ್ನಾಕರ ಪೂಜಾರಿ ಭಾಗವಹಿಸಿದ್ದರು.