ಬೆಳಗಾವಿ : ನಗರದ ಸಂಗೊಳ್ಳಿ ರಾಯಣ್ಣ ಪ್ರಥಮ ದರ್ಜೆ ಘಟಕ ಮಹಾವಿದ್ಯಾಲಯದ ಎನ್ ಎಸ್ ಎಸ್ ಘಟಕದ ವತಿಯಿಂದ ವೀರ ಸಂನ್ಯಾಸಿ ಸ್ವಾಮಿ ವಿವೇಕಾನಂದರ ಜಯಂತಿಯನ್ನು ಆಚರಿಸಲಾಯಿತು.

ಪ್ರಭಾರ ಪ್ರಾಚಾರ್ಯ ಡಾ ಅರ್ಜುನ ಜಂಬಗಿ ಅವರು ಸ್ವಾಮಿ ವಿವೇಕಾನಂದರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ಮಾತನಾಡಿ, ಸ್ವಾಮಿ ವಿವೇಕಾನಂದರು ಭಾರತದ ಅಧ್ಯಾತ್ಮಿಕ ಪರಮ ಗುರು. ಧಾರ್ಮಿಕ ಕ್ಷೇತ್ರದಲ್ಲಿ ಇರುವ ಅನೇಕ ಗೊಂದಲಗಳಿಗೆ ತೆರೆಯೆಳೆದರು. ಭಾರತದ ಧರ್ಮ ಹಾಗೂ ಇಲ್ಲಿನ ಸಂಸ್ಕೃತಿಯನ್ನು ವಿಶ್ವದೆಲ್ಲೆಡೆಗೆ ಪಸರಿಸಿದರು. ಜೊತೆಗೆ ಮೌಢ್ಯಗಳ ವಿರುದ್ಧ ಹೋರಾಡಲು ಭಾರತೀಯರಿಗೆ ಕರೆ ನೀಡಿದರು.

ಅಂತ್ಯಜರ ಬಗೆಗೆ ವಿಶೇಷ ಕಾಳಜಿ ವಹಿಸಿ, ಅವರ ಬದುಕಿನ ಔನ್ನತ್ಯಕ್ಕಾಗಿ ಹೋರಾಡಿದರು. ಭಾರತೀಯರಲ್ಲಿ ಸ್ವಾಭಿಮಾನವನ್ನು ತುಂಬಿ ತಾಯಿನಾಡಿನ ಸ್ವಾತಂತ್ರ್ಯಕ್ಕಾಗಿ ಹೋರಾಡಲು ಪ್ರೇರೇಪಿಸಿದರು. ಅವರಿಂದಾಗಿ ಸ್ವಾತಂತ್ರ್ಯದ ಹೋರಾಟದ ಕಿಚ್ಚು ನಾಡಿನೆಲ್ಲೆಡೆ ಹರಡಿತು. ಪ್ರತಿಯೊಬ್ಬರು ದೇಶಕ್ಕಾಗಿ ವಿಚಾರ ಮಾಡುವಂತಾಯಿತು ಎಂದರು.

ಎನ್. ಎಸ್. ಎಸ್ ಅಧಿಕಾರಿಗಳು, ಸಿಬ್ಬಂದಿಗಳು ಮತ್ತು ಎನ್. ಎಸ್. ಎಸ್ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.