ಬೆಳಗಾವಿ : ಕೆಳಗೆ ಬಿದ್ದರೂ ಮೀಸೆ ಮಣ್ಣಾಗಲಿಲ್ಲ ಎಂಬಂತೆ ರಾಜ್ಯ ಸರಕಾರ ಬೆಳಗಾವಿಯಲ್ಲಿ ಬರುವ ಡಿ. 8ರಂದು ನಡೆಸಲು ಉದ್ದೇಶಿಸಿರುವ ಚಳಿಗಾಲ ಅಧಿವೇಶನದ ವಿರುದ್ದ ನಾಡವಿರೋಧಿ ಎಮ್ ಇಎಸ್ ಸಂಘಟನೆ ಮಹಾಮೇಳಾವಾ ನಡೆಸಲು ಸಿದ್ದತೆ ನಡೆಸಿದ್ದು, ಈ ಬಗ್ಗೆ ಬೆಳಗಾವಿಯ ಮರಾಠಾ ಭವನದಲ್ಲಿ ಸಭೆ ನಡೆಸಿದ್ದಾರೆ. ಅಲ್ಲದೆ ಕನ್ನಡಗರ ವಿರುದ್ದ ಕ್ರಮಕೈಗೊಳ್ಳದಿದ್ದರೆ ತಾವೇ ಆಂದೋಲನ ಮಾಡುವ ಬಗ್ಗೆ ಪೊಲೀಸ ಆಯುಕ್ತರಿಗೆ ಮನವಿ ಸಲ್ಲಿಸಿದ್ದಾರೆ.
ಸದಾ ಒಂದಿಲ್ಲ ಒಂದು ತಗಾದೆ ತೆಗೆಯುವ ಮೂಲಕ ಗಡಿ ಜಿಲ್ಲೆ ಬೆಳಗಾವಿಯಲ್ಲಿ ಅಶಾಂತಿಯನ್ನು ಉಂಟು ಮಾಡುವ ಝಾಪಾಗಳು ಮೊನ್ನೆ ರವಿವಾರ ಬೆಳಗಾವಿಯ ಮರಾಠಾ ಭವನದಲ್ಲಿ ಸಭೆ ನಡೆಸಿ ರಾಜ್ಯ ಸರಕಾರ ಬರುವ ಡಿ. 8ರಂದು ಬೆಳಗಾವಿಯಲ್ಲಿ ನಡೆಸಲು ಉದ್ದೇಶಿಸಿರುವ ಚಳಿಗಾಲ ಅಧಿವೇಶನ ವಿರುದ್ದ ಮಹಾಮೇಳಾವಾ ನಡೆಸುವ ಕುರಿತು ಚರ್ಚೆ ನಡೆಸಿದ್ದಾರೆ.
ಅಲ್ಲದೆ ಬೆಳಗಾವಿಯಲ್ಲಿ ಕನ್ನಡಿಗರು ಅನ್ಯ ಭಾಷೆಯ ನಾಮಫಲಕಗಳ ವಿರುದ್ದ ನಡೆಸುತ್ತಿರುವ ಹೋರಾಟದ ವಿರುದ್ದ ಕ್ರಮಕೈಗೊಳ್ಳುವಂತೆ ಬೆಳಗಾವಿ ಪೊಲೀಸ್ ಆಯುಕ್ತ ಭೂಷಣ ಬೊರಸೆ ಅವರಿಗೆ ಮನವಿಯೊಂದನ್ನು ಸಲ್ಲಿಸಿ, ಕನ್ನಡಿಗರ ವಿರುದ್ದ ಕ್ರಮಕೈಗೊಳ್ಳದೆ ಇದ್ದಲ್ಲಿ ತಾವು ಆಂದೋಲನ ನಡೆಸುವದಾಗಿ ಆಯುಕ್ತರಿಗೆ ನೀಡಿದ ಮನವಿಯಲ್ಲಿ ತಿಳಿಸಿದ್ದಾರೆ.
ಈ ಕುರಿತು ಹೇಳಿಕೆ ನೀಡಿರುವ ಮಾಜಿ ಶಾಸಕ ಕಿಣೇಕರ ತಾವು ಬರುವ ಡಿ. 8ರಂದು ಬೆಳಗಾವಿಯಲ್ಲಿ ನಡೆಯಲಿರುವ ಚಳಿಗಾಲದ ಅಧಿವೇಶನ ವಿರುದ್ದ ಮಹಾಮೇಳಾವ ನಡೆಸಲು ಅನುಮತಿ ನೀಡುವಂತೆ ಪೊಲೀಸ್ ಆಯುಕ್ತರಿಗೆ ಮನವಿ ಮಾಡುವದಾಗಿ ಹೇಳಿಕೆ ಕಿಣೇಕರ ನೀಡಿದ್ದಾರೆ.


,
,

















