
ಉಡುಪಿ: ಕುಂಭಮೇಳಕ್ಕೆ ತೆರಳುವ ವಿಶೇಷ ರೈಲಿಗೆ ಪೇಜಾವರ ವಿಶ್ವಪ್ರಸನ್ನ ತೀರ್ಥ ಶ್ರೀಪಾದರು ನಗರದ ಇಂದ್ರಾಳಿ ರೈಲು ನಿಲ್ದಾಣದಲ್ಲಿ ಸೋಮವಾರ ಹಸಿರು ನಿಶಾನೆ ತೋರಿದರು.
ಬಳಿಕ ಮಾತನಾಡಿದ ಅವರು, ಭಕ್ತರು ಗಡಿಬಿಡಿ, ನೂಕು ನುಗ್ಗಲು ಮಾಡದೆ ಸಾವಧಾನದಿಂದ ವರ್ತಿಸಬೇಕು ಎಂದರು.
ಸಂಸದ ಕೋಟ ಶ್ರೀನಿವಾಸ ಪೂಜಾರಿ ಮಾತನಾಡಿ, ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಹಾಗೂ ಸಹಾಯಕ ಸಚಿವ ವಿ.ಸೋಮಣ್ಣ ಅವರ ಪ್ರಯತ್ನದಿಂದ ವಿಶೇಷ ರೈಲಿನ ವ್ಯವಸ್ಥೆ ಮಾಡಲಾಗಿದೆ ಎಂದು ಹೇಳಿದರು.
ಕುಂಭ ಮೇಳವು ಫೆ.25ರ ನಂತರವೂ ವಿಸ್ತರಣೆಯಾದರೆ ಉಡುಪಿಯಿಂದ ಇನ್ನೊಂದು ರೈಲು ಆರಂಭಕ್ಕೆ ಯತ್ನಿಸಲಾಗುವುದು ಎಂದರು.
ಶಾಸಕರಾದ ಯಶ್ಪಾಲ್ ಸುವರ್ಣ, ಕಿರಣ್ ಕೊಡ್ಲಿ, ಸುರೇಶ್ ಶೆಟ್ಟಿ ಗುರ್ಮೆ, ಗುರುರಾಜ್ ಗಂಟಿಹೊಳೆ, ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯೆ ಗೀತಾಂಜಲಿ ಸುವರ್ಣ, ಪೃಥ್ವಿರಾಜ್ ಶೆಟ್ಟಿ ಬಿಲ್ಲಾಡಿ, ವೀಣಾ ಎಸ್. ಶೆಟ್ಟಿ ಉಪಸ್ಥಿತರಿದ್ದರು. ಸಂಸದರು ಹಾಗೂ ರೈಲ್ವೆ ಅಕಾರಿಗಳನ್ನು ಗೌರವಿಸಲಾಯಿತು. ರೈಲು ಹೊರಟಾಗ ಚಪ್ಪಾಳೆ ತಟ್ಟಿ, ಜೈಶ್ರೀರಾಮ್ ಘೋಷಣೆಯೊಂದಿಗೆ ಬೀಳ್ಕೊಡಲಾಯಿತು.
ಶಿವಮೊಗ್ಗ, ಉತ್ತರ ಕನ್ನಡ, ಚಿಕ್ಕಮಗಳೂರು ಜಿಲ್ಲೆಗಳಿಂದಲೂ ಪ್ರಯಾಗ್ರಾಜ್ಗೆ ತೆರಳಲು ಟಿಕೆಟ್ ಬುಕ್ಕಿಂಗ್ ಮಾಡಿದ ಯಾತ್ರಾರ್ಥಿಗಳು ಉಡುಪಿಗೆ ಬಂದಿದ್ದರು.