ಬೆಂಗಳೂರು:
ಕರ್ನಾಟಕದಲ್ಲಿ ಕನ್ನಡವೇ ಸಾರ್ವಭೌಮ ಭಾಷೆ ಎಂಬುದನ್ನು ಎತ್ತಿ ಹಿಡಿಯುವ ದಿಟ್ಟ ನಿರ್ಧಾರ ಕೈಗೊಂಡಿರುವ ರಾಜ್ಯ ಸರಕಾರ, ವ್ಯಾಪಾರೋದ್ಯಮ ನಾಮಫಲಕಗಳಲ್ಲಿ ಕನ್ನಡ ಭಾಷೆಗೆ ಅಗ್ರಸ್ಥಾನ ನೀಡುವ ಮಹತ್ವದ ಕಾನೂನು ಜಾರಿಗೆ ನಿರ್ಧರಿಸಿದೆ.

ಕನ್ನಡ ಸಂಘಟನೆಗಳ ಹಕ್ಕೊತ್ತಾಯ, ಹೋರಾಟದ ಆಶಯದಂತೆ ನಾಮಫಲಕಗಳ ಮೇಲ್ಬಾಗದಲ್ಲಿ ಶೇ.60ರಷ್ಟು ಕನ್ನಡ ಭಾಷೆ ಬಳಸುವುದನ್ನು ಕಡ್ಡಾಯ ಮಾಡಿ ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ ವಿಧೇಯಕ -2024’ಕ್ಕೆ ತಿದ್ದುಪಡಿ ಮಾಡಿ ಸುಗ್ರೀವಾಜ್ಞೆ ಹೊರಡಿಸಲು ರಾಜ್ಯ ಸಚಿವ ಸಂಪುಟ ಸಭೆ ನಿರ್ಣಯಿಸಿದೆ.

ಸಿಎಂ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ನಡೆದ ಸಂಪುಟ ಸಭೆಯ ಈ ನಿರ್ಧಾರವನ್ನು ಕಾನೂನು ಸಚಿವ ಎಚ್.ಕೆ.ಪಾಟೀಲ ಈ ಸುದ್ದಿಗೋಷ್ಠಿಯಲ್ಲಿ ಪ್ರಕಟಿಸಿದರು.