
ಉಡುಪಿ: ಅಕ್ಷಯ ತೃತೀಯ ದಿನವಾದ ಬುಧವಾರ
ಪರ್ಯಾಯ ಪುತ್ತಿಗೆ ಸುಗುಣೇಂದ್ರತೀರ್ಥರು ಹಾಗೂ ಕಿರಿಯ ಯತಿ ಸುಶ್ರೀಂದ್ರತೀರ್ಥರ ನೇತೃತ್ವದಲ್ಲಿ ಶ್ರೀಕೃಷ್ಣ ದೇವರಿಗೆ ಸುವರ್ಣ ತುಲಾಭಾರ ನಡೆಸಲಾಯಿತು.
ಇದೇ ಸಂದರ್ಭದಲ್ಲಿ ಶ್ರೀಕೃಷ್ಣನ ಮೂಲ ವಿಗ್ರಹಕ್ಕೆ ಪರ್ಯಾಯ ಶ್ರೀಪಾದರ ಉಪಸ್ಥಿತಿಯಲ್ಲಿ ಪುತ್ತಿಗೆ ಕಿರಿಯ ಶ್ರೀಪಾದರು ಸುವರ್ಣ ಕನಕಾಭಿಷೇಕ ನೆರವೇರಿಸಿದರು.
ಸಂಜೆ ಚಂದ್ರಶಾಲೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಪುತ್ತಿಗೆ ಶ್ರೀ ಆಶೀರ್ವಚನ ನೀಡಿದರು.
ಪರ್ಯಾಯ ಪುತ್ತಿಗೆ ಮಠದ ದಿವಾನ ನಾಗರಾಜ ಆಚಾರ್ಯ, ಕಾರ್ಯದರ್ಶಿ ಪ್ರಸನ್ನಾಚಾರ್ಯ ಉಪಸ್ಥಿತರಿದ್ದರು.