
ಹೆಬ್ರಿ : ಹೆಬ್ರಿಯ ಪಾಂಡುರಂಗ ರಮಣ ನಾಯಕ್ ಅಮೃತ ಭಾರತಿ ಪದವಿಪೂರ್ವ ಕಾಲೇಜಿನಲ್ಲಿ ನಡೆಯುತ್ತಿರುವ ಪ್ರಥಮ ಪಿಯುಸಿ ವಿದ್ಯಾರ್ಥಿಗಳ ಪುನಶ್ಚೇತನ ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದ ಕೌನ್ಸಿಲರ್ ಗಿರೀಶ್ ರವರು ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿ, ಈ ದೇಹ ಪ್ರಕೃತಿದತ್ತವಾದದು ಅದನ್ನು ಇದ್ದ ಹಾಗೆಯೇ ಸ್ವೀಕರಿಸಬೇಕು. ಅದರ ಸೌಂದರ್ಯಕ್ಕೆ ಪ್ರಾಮುಖ್ಯತೆ ಕೊಡದೆ , ಅದರ ಆರೋಗ್ಯಕ್ಕೆ ಪ್ರಾಮುಖ್ಯತೆ ಕೊಡಬೇಕು. ಹದಿಹರೆಯದ ವಯಸ್ಸಿನಲ್ಲಿ ಸಹಜವಾದ ಆಕರ್ಷಣೆಗಳು ಇರುತ್ತವೆ. ಅವುಗಳನ್ನು ನಿಗ್ರಹಿಸುವ ಮನಸ್ಥಿತಿಯನ್ನು ನಾವು ಬೆಳೆಸಿಕೊಳ್ಳಬೇಕು. ಸ್ಪಷ್ಟ ಗುರಿ, ನಿಖರವಾದ ನಿರ್ಧಾರ ಮತ್ತು ಶಿಸ್ತು ನಮ್ಮನ್ನು ಜೀವನದಲ್ಲಿ ಬಹಳ ಎತ್ತರಕ್ಕೆ ಕೊಂಡೊಯ್ಯುತ್ತದೆ ಎಂದರು.
ಸಾರ್ವಜನಿಕ ಸಂಪರ್ಕ ಅಧಿಕಾರಿ ವಿಜಯಕುಮಾರ್ ಶೆಟ್ಟಿ ಸ್ಮರಣಿಕ್ಕೆ ನೀಡಿ ಗೌರವಿಸಿದರು. ಆಡಳಿತ ಮಂಡಳಿಯ ಸದಸ್ಯ ವಿಷ್ಣುಮೂರ್ತಿ ನಾಯಕ್, ಪ್ರಾಂಶುಪಾಲ ಪ್ರಕಾಶ್ ಜೋಗಿ, ಉಪನ್ಯಾಸಕರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಜೀವಶಾಸ್ತ್ರ ಉಪನ್ಯಾಸಕಿ ಚಿತ್ರಾ ವಿ. ನಾಯಕ್ ನಿರೂಪಿಸಿ ವಂದಿಸಿದರು.