ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ದರ್ಶನ್‌ ಎಚ್‌.ವಿ. ಅವರು ಬುಧವಾರ ನಗರದ ಜಿಲ್ಲಾಧಿಕಾರಿ ಕಚೇರಿಯಲ್ಲಿ ಅಧಿಕಾರ ಸ್ವೀಕರಿಸಿದರು.

ನಿರ್ಗಮಿತ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ. ಅವರು ನೂತನ ಜಿಲ್ಲಾಧಿಕಾರಿಗೆ ಅಧಿಕಾರ ಹಸ್ತಾಂತರಿಸಿ ಶುಭ ಹಾರೈಸಿದರು. 2016ರ ಐಎಎಸ್‌ ಬ್ಯಾಚ್‌ನ ಅಧಿಕಾರಿಯಾಗಿರುವ ದರ್ಶನ್‌ ಎಚ್‌.ವಿ. ಅವರು ವಾಣಿಜ್ಯ ತೆರಿಗೆಗಳ ಇಲಾಖೆಯ ಬೆಂಗಳೂರಿನ ಸೇವಾ ವಿಶ್ಲೇಷಣೆ ವಿಭಾಗದ ಹೆಚ್ಚುವರಿ ಆಯುಕ್ತರಾಗಿದ್ದರು. ಅದಕ್ಕೂ ಹಿಂದೆ ತುಮಕೂರು ಮಹಾನಗರ ಪಾಲಿಕೆಯ ಆಯುಕ್ತರಾಗಿ, ಕೋಲಾರ ಜಿ.ಪಂ. ಸಿಇಒ ಆಗಿ ಕರ್ತವ್ಯ ನಿರ್ವಹಿಸಿದ್ದರು.