ಹೆಬ್ರಿ : ಕನ್ನಡ ಸಾಹಿತ್ಯ ಪರಿಷತ್ತು ಉಡುಪಿ ಜಿಲ್ಲೆ ,ಹೆಬ್ರಿ ತಾಲೂಕು ಘಟಕ ಹಾಗೂ ಎಸ್.ಆರ್ ಸಮೂಹ ಶಿಕ್ಷಣ ಸಂಸ್ಥೆ ಹೆಬ್ರಿ ಇವರ ಸಹಯೋಗದೊಂದಿಗೆ ಎಸ್ ಎಸ್ ಎಲ್ ಸಿ ಪಬ್ಲಿಕ್ ಮತ್ತು ಪದವಿ ಪೂರ್ವ ವಾರ್ಷಿಕ ಪರೀಕ್ಷೆಯಲ್ಲಿ ಪೂರ್ಣ ಅಂಕ ಪಡೆದ ವಿದ್ಯಾರ್ಥಿಗಳಿಗೆ ಅಭಿನಂದನೆ ಕಾರ್ಯಕ್ರಮ ದಿನಾಂಕ 28.6.2025ರಂದು ಎಸ್ ಆರ್ ಸಮೂಹ ಶಿಕ್ಷಣ ಸಂಸ್ಥೆಯಲ್ಲಿ ನಡೆಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕನ್ನಡ ಸಾಹಿತ್ಯ ಪರಿಷತ್ತು ಹೆಬ್ರಿ ಘಟಕದ ಅಧ್ಯಕ್ಷ ಶ್ರೀನಿವಾಸ ಭಂಡಾರಿ ವಹಿಸಿದ್ದರು. ಕಾರ್ಯಕ್ರಮವನ್ನು ಎಸ್ ಆರ್ ಸಮೂಹ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಎಚ್ ನಾಗರಾಜ ಶೆಟ್ಟಿ ಉದ್ಘಾಟಿಸಿದರು.

ಕ.ಸಾ.ಪ ಉಡುಪಿ ಜಿಲ್ಲಾಧ್ಯಕ್ಷ ನೀಲಾವರ ಸುರೇಂದ್ರ ಅಡಿಗ ಆಶಯ ನುಡಿಗಳನ್ನಾಡಿದರು. ಜಿಲ್ಲಾ ನಿವೃತ್ತ ದೈಹಿಕ ಶಿಕ್ಷಣಾಧಿಕಾರಿ ಸೀತಾನದಿ ವಿಠಲ ಶೆಟ್ಟಿ, ಎಸ್ ಆರ್ ಸಮೂಹ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿ ಸಪ್ನಾ ಎನ್ ಶೆಟ್ಟಿ,,ಉಡುಪಿ ಜಿಲ್ಲಾ ಕ.ಸಾ.ಪ ಗೌರವ ಕಾರ್ಯದರ್ಶಿ ಸುಬ್ರಹ್ಮಣ್ಯ ಶೆಟ್ಟಿ, ಉಡುಪಿ ಜಿಲ್ಲಾ ಕ.ಸಾ.ಪ ಸಂಘಟನಾ ಕಾರ್ಯದರ್ಶಿ ಪಿ.ವಿ.ಆನಂದ ಸಾಲಿಗ್ರಾಮ, ಹೆಬ್ರಿ ಕ್ಲಸ್ಟರ್ ಸಂಪನ್ಮೂಲ ವ್ಯಕ್ತಿ ರಾಘವೇಂದ್ರ ಆಚಾರ್ಯ, ಉಡುಪಿ ಜಿಲ್ಲಾ ಕ.ಸಾ.ಪ ಪದಾಧಿಕಾರಿ ನರಸಿಂಹ ಮೂರ್ತಿ ಉಪಸ್ಥಿತರಿದ್ದರು.
ಕ. ಸಾ.ಪ ಗೌರವ ಕಾರ್ಯದರ್ಶಿ ಮಂಜುನಾಥ ಕೆ ಶಿವಪುರ ಪ್ರಾಸ್ತಾವಿಕ ನುಡಿಗಳನ್ನು ಆಡಿದರು.

ಎಸ್ ಆರ್ ಸಮೂಹ ಶಿಕ್ಷಣ ಸಂಸ್ಥೆಯ ಕನ್ನಡ ಉಪನ್ಯಾಸಕ ದೀಪಕ್ ಎನ್ ಸ್ವಾಗತಿಸಿ,ಕ.ಸಾ.ಪ ಸಂಘಟನಾ ಕಾರ್ಯದರ್ಶಿ ಪ್ರೀತೇಶ ಶೆಟ್ಟಿ ವಂದಿಸಿದರು.ಕ.ಸಾ.ಪ ಗೌರವ ಕಾರ್ಯದರ್ಶಿ ಡಾ| ಪ್ರವೀಣ ಕುಮಾರ್ ನಿರೂಪಿಸಿದರು.ಕ.ಸಾ.ಪ ಪದಾಧಿಕಾರಿ ಪ್ರುಷ್ಪಾವತಿ ಶೆಟ್ಟಿ ಪ್ರಾರ್ಥನೆಗೈದರು.

ಎಸ್ ಎಸ್ ಎಲ್ ಸಿ ಪಬ್ಲಿಕ್ ಮತ್ತು ಪದವಿ ಪೂರ್ವ ವಾರ್ಷಿಕ ಪರೀಕ್ಷೆಯಲ್ಲಿ ಪೂರ್ಣ ಅಂಕ ಪಡೆದ ವಿದ್ಯಾರ್ಥಿಗಳನ್ನು ಅಭಿನಂದಿಸಲಾಯಿತು. ನುಡಿಗಳನ್ನಾಡಿದರು.

ಕಾರ್ಯಕ್ರಮ ಉದ್ಘಾಟಿಸಿದ ಹೆಚ್. ನಾಗರಾಜ ಶೆಟ್ಟಿ ಕನ್ನಡದ ಕಾರ್ಯಕ್ರಮಗಳು ನಿರಂತರವಾಗಿ ನಡೆಯಬೇಕು.ಕಲಿಕೆಯ ಮಾಧ್ಯಮ ಮುಖ್ಯವಲ್ಲ. ಕಲಿಯುವ ಮನಸ್ಸು ಮುಖ್ಯ.ಮಾತೃಭಾಷೆಯಲ್ಲಿ ಉತ್ತಮ ಪ್ರತಿಭೆ ತೋರ್ಪಡಿಸಲು ಸಾಧ್ಯ.ಅಂತಹ ಎಲ್ಲಾ ಪ್ರತಿಭೆಗಳು ಇಂತಹ ಕಾರ್ಯಕ್ರಮಗಳ ಮೂಲಕ ಅನಾವರಣಗೊಳ್ಳಬೇಕು ಎಂದರು.

ಸೀತಾನದಿ ವಿಠಲ ಶೆಟ್ಟಿ ಮಾತನಾಡಿ ಕನ್ನಡದಲ್ಲಿ ಪೂರ್ಣ ಅಂಕ ಪಡೆಯುವ ವಿದ್ಯಾರ್ಥಿಗಳು ಅಭಿನಂದನಾರ್ಹರು. ಕನ್ನಡ ಮಾತನಾಡಿದಾಗ ಆ ಭಾಷೆ ಇನ್ನಷ್ಟು ಸಮೃದ್ಧಗೊಳ್ಳುವುದು. ವಿದ್ಯಾರ್ಥಿಗಳ ಕನ್ನಡ ಪ್ರೀತಿ ಕೊಂಡಾಡುವಂತಹುದು ಎಂದರು.

ನೀಲಾವರ ಸುರೇಂದ್ರ ಅಡಿಗ ಅವರು ಮಾತನಾಡಿ ಕನ್ನಡದ ಪದಬಳಕೆ ವ್ಯಾವಹಾರಿಕವಾಗಿ ಹೆಚ್ಚಾಗಬೇಕು. ಎಷ್ಟು ಭಾಷೆಗಳನ್ನಾದರೂ ಕಲಿಯಬಹುದು. ಆದರೆ ನಮ್ಮ ಮಾತ್ರ ಭಾಷೆಯ ಪ್ರೀತಿ ಮತ್ತು ಬಳಕೆ ಕಡಿಮೆಯಾಗಬಾರದು ಎಂದರು.

ಕನ್ನಡ ಭಾಷಾ ಶಿಕ್ಷಕರು, ಹೆಬ್ರಿ ಕಸಾಪ ಪದಾಧಿಕಾರಿಗಳು, ಹೆಬ್ರಿ ತಾಲೂಕು ವ್ಯಾಪ್ತಿಯ ಪ್ರೌಢಶಾಲೆ ಮತ್ತು ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಹಾಗೂ ಎಸ್.ಆರ್ ಶಿಕ್ಷಣ ಸಂಸ್ಥೆಯ ವಿದ್ಯಾರ್ಥಿಗಳು ಭಾಗವಹಿಸಿದರು.