ಬೆಳಗಾವಿ : ಬಿಜೆಪಿ ವಿವಿಧ ಜಿಲ್ಲೆಗಳ ನೂತನ ಅಧ್ಯಕ್ಷರನ್ನು ನೇಮಕ ಮಾಡಿ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಆದೇಶ ಹೊರಡಿಸಿದ್ದಾರೆ. ಬೆಳಗಾವಿ ನಗರಕ್ಕೆ ಗೀತಾ ಸುತಾರ, ಬೆಳಗಾವಿ ಗ್ರಾಮಾಂತರಕ್ಕೆ ಸುಭಾಷ ಪಾಟೀಲ ಅವರನ್ನು ನೇಮಕ ಮಾಡಲಾಗಿದೆ.
ಗೀತಾ ಸುತಾರ ಅವರು ಬೆಳಗಾವಿ ದಕ್ಷಿಣ ವಿಧಾನಸಭಾ ಮತಕ್ಷೇತ್ರದ ವ್ಯಾಪ್ತಿ ಒಳಪಟ್ಟವರು ಅವರು ಕಳೆದ 17 ವರ್ಷಗಳಿಂದ ಬಿಜೆಪಿಯ ಸಕ್ರಿಯ ಕಾರ್ಯಕರ್ತೆಯಾಗಿ ದುಡಿಯುತ್ತಿದ್ದಾರೆ. ಇದೀಗ ರಾಜ್ಯ ಬಿಜೆಪಿ ಬೆಳಗಾವಿ ಮಹಾನಗರದಲ್ಲಿ ಮಹಿಳೆಗೆ ಬಿಜೆಪಿ ಕಟ್ಟುವ ಹೊಣೆ ವಹಿಸಿದೆ.