| Latest Version 9.0.7 |

State News

ಕೈ ಕಚೇರಿಯಲ್ಲಿ ಮಾರಾಮಾರಿ..!

ಬೆಳಗಾವಿ: ರಾಜ್ಯದಲ್ಲಿ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲೂ ಕಾಂಗ್ರೆಸ್ ಅಧ್ಯಕ್ಷರ ಆಯ್ಕೆ ಪ್ರಕ್ರಿಯೆಗಳು ನಡೆಯುತ್ತಿದೆ.

ಇದೇ ವಿಚಾರಕ್ಕೆ ಸಂಬಂಧಿಸಿ ಬೆಳಗಾವಿಯಲ್ಲಿ ನಡೆಯುತ್ತಿರುವ ಸಭೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರ ನಡುವೆ ಹೊಡೆದಾಟ ನಡೆದಿದೆ.

ಬೆಳಗಾವಿ ನಗರದ ಸಂಗೊಳ್ಳಿ ರಾಯಣ್ಣ ವೃತ್ತದಲ್ಲಿರುವ ಕಾಂಗ್ರೆಸ್ ಕಚೇರಿಯಲ್ಲಿ
ಎಐಸಿಸಿ ವೀಕ್ಷಕ ಮನೋಜ್ ಚವ್ಹಾಣ ನೇತೃತ್ವದಲ್ಲಿ ನಗರ ಘಟಕದ ಅಧ್ಯಕ್ಷರ ಆಯ್ಕೆ ವಿಚಾರವಾಗಿ ಅಭಿಪ್ರಾಯ ಸಂಗ್ರಹ ಮಾಡಲಾಗುತ್ತಿತ್ತು. ಅಭಿಪ್ರಾಯ ಸಂಗ್ರಹದಲ್ಲಿ ಕಾಂಗ್ರೆಸ್ ಪಕ್ಷದ ವಿರುದ್ಧ ಮಾಜಿ ಶಾಸಕ ರಮೇಶ ಕುಡಚಿ ಆಕ್ರೋಶ ಹೊರ ಹಾಕಿದ್ದಾರೆ.

ಈ ವೇಳೆ ಮಾತಿಗೆ ಮಾತು ಬೆಳೆದು ಗಲಾಟೆ ಆರಂಭವಾಗಿ ಕಾರ್ಯಕರ್ತರು ಹೊಡೆದಾಡಿದ್ದಾರೆ.

ಮಾಜಿ ಶಾಸಕ ರಮೇಶ ಕುಡಚಿ ಆಪ್ತ ಹೇಮಂತ ಲೇಂಗಡೆ ಎಂಬಾತನ ಮೇಲೆ ಹಲ್ಲೆ ಮಾಡಿರುವ ಆರೋಪ ಕೇಳಿ ಬಂದಿದೆ. ಲೆಂಗಡೆ ಸಾಮಾಜಿಕ ಜಾಲತಾಣಗಳಲ್ಲೂ ಪಕ್ಷದ ಮುಖಂಡರ ವಿರುದ್ಧ ನಿರಂತರ ಪೋಸ್ಟ್ ಹಾಕುತ್ತಿದ್ದರೆನ್ನಲಾಗಿದೆ.

ಘಟನೆ ನಡೆಯುತ್ತಿದ್ದಂತೆ ಮಾರ್ಕೆಟ್ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಸ್ಥಿತಿ ತಿಳಿಗೊಳಿಸಿದ್ದಾರೆ.

Team Udayaprabha
";