ಬೆಂಗಳೂರು :
ಕೂಚ್ ಬಿಹಾರ್ ಕ್ರಿಕೆಟ್ ಟ್ರೋಫಿಯಲ್ಲಿ ಕರ್ನಾಟಕದ ಬ್ಯಾಟ್ಸ್ ಮನ್ ಪ್ರಖರ್ ಚತುರ್ವೇದಿ 404 ಗಳಿಸಿ ರಾಷ್ಟ್ರದ ಗಮನ ಸೆಳೆದಿರುವುದನ್ನು ಸ್ವತಃ ಕ್ರಿಕೆಟ್ ಪ್ರೇಮಿಯಾಗಿರುವ ಸಿಎಂ ಸಿದ್ದರಾಮಯ್ಯ ಅಭಿನಂದಿಸಿದ್ದಾರೆ.
ಸೋಮವಾರ ಶಿವಮೊಗ್ಗದಲ್ಲಿ ಮುಂಬೈ ವಿರುದ್ಧ ನಡೆದ ಫೈನಲ್ ಪಂದ್ಯದಲ್ಲಿ ಚತುರ್ವೇದಿ ಅವರು, 404 ರನ್ ಗಳಿಸುವ ಮೂಲಕ ವಿಶೇಷ ಸಾಧನೆ ಮಾಡಿದ್ದಾರೆ. ಈ ಮೂಲಕ ಅವರು 25 ವರ್ಷಗಳ ಯುವರಾಜ್ ಸಿಂಗ್ ಅವರ ದಾಖಲೆಯನ್ನು ಅಳಿಸಿ ಹಾಕಿದ್ದಾರೆ. ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಯುವಪೋರನನ್ನು ಅಭಿನಂದಿಸಿದ್ದಾರೆ.
ಸಿದ್ದರಾಮಯ್ಯ ಶುಭ ಹಾರೈಕೆ :
79 ವರ್ಷಗಳಲ್ಲಿ ಮೊದಲ ಬಾರಿಗೆ ಕೂಚ್ ಬಿಹಾರ್ ಟ್ರೋಫಿ ಗೆದ್ದಿರುವ ಕರ್ನಾಟಕದ 19 ವರ್ಷದೊಳಗಿನವರ ಕ್ರಿಕೆಟ್ ತಂಡಕ್ಕೆ ಅಭಿನಂದನೆಗಳು. ಈ ಗೆಲುವು ಸಂಕ್ರಾಂತಿ ಹಬ್ಬದ ಸಂಭ್ರಮವನ್ನು ಹೆಚ್ಚಿಸಿದೆ.
ಆರಂಭಿಕ ಬ್ಯಾಟರ್ ಪ್ರಖರ್ ಚತುರ್ವೇದಿ ಅಜೇಯ 404 ರನ್ ಗಳಿಸಿ ದಾಖಲೆ ನಿರ್ಮಿಸಿರುವುದು ಹೆಮ್ಮೆಯ ಸಂಗತಿಯಾಗಿದೆ.
ಕರ್ನಾಟಕ ತಂಡವು 890 ರನ್ಗಳ ದಾಖಲೆಯ ಮೊತ್ತವನ್ನು
ಪೇರಿಸುವ ಮೂಲಕ ಹೊಸ ಮೈಲಿಗಲ್ಲು ಸಾಧಿಸಿದೆ. ಯುವ ಆಟಗಾರರು ಮುಂದಿನ ದಿನಗಳಲ್ಲಿ ಅಂತರಾಷ್ಟ್ರೀಯ ಮಟ್ಟದಲ್ಲಿ ಸಾಧನೆ ಮಾಡಲಿ ಎಂದು ಮನಃಪೂರ್ವಕವಾಗಿ ಹಾರೈಸುತ್ತಿದ್ದೇನೆ.