| Latest Version 9.0.7 |

State News

ಹೆಬ್ರಿ ಎಸ್.ಆರ್.ಕ್ಲಸ್ಟರ್ ಮಟ್ಟದ ವಾಲಿಬಾಲ್ ಪಂದ್ಯಾಟ

ಹೆಬ್ರಿ : ಹೆಬ್ರಿ ಕ್ಲಸ್ಟರ್ ಮಟ್ಟದ ಪ್ರೌಢಶಾಲಾ ಬಾಲಕ ಬಾಲಕಿಯರ ವಾಲಿಬಾಲ್ ಪಂದ್ಯಾಟವು ಹೆಬ್ರಿ ಎಸ್.ಆರ್ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ಕ್ರೀಡಾಂಗಣದಲ್ಲಿ ಜರುಗಿತು. ಎಸ್.ಆರ್ ಸಮೂಹ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಎಚ್.ನಾಗರಾಜ ಶೆಟ್ಟಿ ಉದ್ಘಾಟಿಸಿ, ವಿದ್ಯಾರ್ಥಿಗಳು ಕ್ರೀಡಾ ಮನೋಭಾವನೆಯನ್ನು ಬೆಳೆಸಿಕೊಳ್ಳಬೇಕು. ಸೋಲು ಗೆಲುವು ಸಹಜ ಅದನ್ನು ಧನಾತ್ಮಕವಾಗಿ ಸ್ವೀಕರಿಸುವ ಮನಸ್ಸಿರಬೇಕು. ಕ್ರೀಡೆಯಲ್ಲಿ ಶಿಸ್ತು ಸಂಯಮ ಅತೀ ಮುಖ್ಯ. ವಿದ್ಯಾರ್ಥಿಗಳೆಲ್ಲರೂ ಕ್ರೀಡಾ ಚೌಕಟ್ಟನ್ನು ಮೀರದೆ ಕ್ರೀಡೆಯಲ್ಲಿ ಪಾಲ್ಗೊಳ್ಳಬೇಕು. ಎಲ್ಲರಿಗೂ ಶುಭವಾಗಲಿ ಎಂದು ಶುಭ ಹಾರೈಸಿದರು.

ಎಸ್.ಆರ್ ಸಮೂಹ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿ ಸಪ್ನಾ ಎನ್ ಶೆಟ್ಟಿ, ಎಸ್.ಆರ್ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ಮುಖ್ಯೋಪಾಧ್ಯಾಯ ಗೋಪಾಲಾಚಾರ್ಯ, ದೈಹಿಕ ಶಿಕ್ಷಣಾಧಿಕಾರಿಗಳು, ಹೆಬ್ರಿ ತಾಲೂಕಿನ ಎಲ್ಲಾ ದೈಹಿಕ ಶಿಕ್ಷಣ ಶಿಕ್ಷಕರು ಉಪಸಿತರಿದ್ದರು.

Team Udayaprabha
";