ಖಾನಾಪುರ: ಪ್ರಧಾನಿ ನರೇಂದ್ರ ಮೋದಿ ಅವರ ಜನ್ಮದಿನದ ಪ್ರಯುಕ್ತ ಹಮ್ಮಿಕೊಂಡಿರುವ ಸೇವಾ ಸಂಕಲ್ಪ ಅಭಿಯಾನದಡಿ ಖಾನಾಪುರ ವಿಧಾನಸಭಾ ಕ್ಷೇತ್ರದ ಬರಗಾಂವ ಹಾಗೂ ಖಾನಾಪುರ ಪಟ್ಟಣದಲ್ಲಿ ‘ಅಂಗನ ಮಿಲನ’ ಸೇವಾ ಕಾರ್ಯಕ್ರಮ ನಡೆಯಿತು.
ಸಮಾಜದ ಅಭಿವೃದ್ಧಿಗೆ ನಿಸ್ವಾರ್ಥವಾಗಿ ಸೇವೆ ಸಲ್ಲಿಸುತ್ತಿರುವ ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಪೌರಕಾರ್ಮಿಕರನ್ನು ಗೌರವಪೂರ್ವಕವಾಗಿ ಸನ್ಮಾನಿಸಲಾಯಿತು.
ಮಕ್ಕಳ ಸರ್ವತೋಮುಖ ಬೆಳವಣಿಗೆಗೆ ಶ್ರಮಿಸುತ್ತಿರುವ ಅಂಗನವಾಡಿ ಕಾರ್ಯಕರ್ತೆಯರು ಹಾಗೂ ನಗರದ ಸ್ವಚ್ಛತೆ ಮತ್ತು ನೈರ್ಮಲ್ಯ ಕಾಪಾಡುವಲ್ಲಿ ಮಹತ್ವದ ಪಾತ್ರ ವಹಿಸುತ್ತಿರುವ ಪೌರಕಾರ್ಮಿಕರ ಸೇವೆಯನ್ನು ಗುರುತಿಸಿ, ಅವರ ಕಾರ್ಯಕ್ಕೆ ಗೌರವ ಸಲ್ಲಿಸಲಾಯಿತು.
ಸಂಸದರಾದ ವಿಶ್ವೇಶ್ವರ ಹೆಗಡೆ ಕಾಗೇರಿ, ಖಾನಾಪುರ ಶಾಸಕ ವಿಠ್ಠಲ ಹಲಗೇಕರ, ರುಕ್ಮಿಣಿ ವಿಠ್ಠಲ ಹಲಗೇಕರ, ಮಂಡಲ ಬಿಜೆಪಿ ಅಧ್ಯಕ್ಷ ಬಸವರಾಜ ಸಾಣಿಕೊಪ್ಪ, ಪ್ರಮೋದ್ ಕೊಚೇರಿ, ಸಂಜಯ ಕುಬಲ, ಸದಾನಂದ ಪಾಟೀಲ, ಸುರೇಶ್ ದೇಸಾಯಿ, ವಸಂತ ದೇಸಾಯಿ, ಬರಮನಿ ಪಾಟೀಲ, ಜೋತಿಬಾ ರೇಮಾನಿ, ಪಂಡಿತ ಒಗಳೆ, ಮಲ್ಲಪ್ಪ ಮಾರಿಹಾಳ, ಗುಂಡು ತೋಪಿನಕಟ್ಟಿ ಸೇರಿದಂತೆ ಪಕ್ಷದ ಹಿರಿಯ ಮುಖಂಡರು, ಸ್ಥಳೀಯ ನಾಯಕರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.


,


















