| Latest Version 9.0.7 |

State News

ಪ್ರಜ್ವಲ್ ರೇವಣ್ಣ ಬೆಂಗಳೂರಿನಿಂದ ಬೆಳಗಾವಿ ಹಿಂಡಲಗಾ ಜೈಲಿಗೆ ವರ್ಗಾವಣೆ

ಬೆಂಗಳೂರು: ಜೀವಾವಧಿ ಶಿಕ್ಷೆ ಅನುಭವಿಸುತ್ತಿರುವ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರನ್ನು ಬೆಂಗಳೂರಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಿಂದ ಬೆಳಗಾವಿಯ ಹಿಂಡಲಗಾ ಜೈಲಿಗೆ ವರ್ಗಾಯಿಸಲಾಗಿದೆ. ಜೈಲಿನ ಬ್ಯಾರಕ್ನಲ್ಲಿ ಸ್ಮಾರ್ಟ್ಫೋನ್, ಚಾರ್ಜರ್, ಸಿಮ್ ಕಾರ್ಡ್ ಹಾಗೂ ಪೆನ್ ಡ್ರೈವ್ ಪತ್ತೆಯಾದ ಘಟನೆಯ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ.

ಏಕಾಏಕಿ ವರ್ಗಾವಣೆಗೆ ಕಾರಣವೇನು?: ಪ್ರಜ್ವಲ್ ಅವರ

ಬ್ಯಾರಕ್ ಗೆ ಸಿಸಿಬಿ ಪೊಲೀಸರು ದಿಢೀ‌ರ್ ದಾಳಿ ನಡೆಸಿದಾಗ ಮೊಬೈಲ್‌, ಚಾರ್ಜರ್, ಆಂಧ್ರಪ್ರದೇಶ ಮೂಲದ ಸಿಮ್ ಕಾರ್ಡ್ ಮತ್ತು ಪೆನ್ನೈವ್ ಪತ್ತೆಯಾಗಿತ್ತು. ಜೈಲಿನಲ್ಲಿದ್ದೂ ಅವರು ಹೊರಗಿನವರೊಂದಿಗೆ ನಿರಂತರ ಸಂಪರ್ಕದಲ್ಲಿದ್ದರು ಎಂಬ
ಮಾಹಿತಿ ಬಹಿರಂಗವಾದದ್ದು ಭಾರಿ ಕೋಲಾಹಲ ಸೃಷ್ಟಿಸಿತ್ತು.

ಈ ಹಿನ್ನೆಲೆಯಲ್ಲಿ ಮೊದಲು ಅವರಿಗಿದ್ದ ಪ್ರತ್ಯೇಕ ಸೆಲ್ ಸೌಲಭ್ಯ ರದ್ದುಪಡಿಸಿ, ಸಿಸಿಟಿವಿ ಕಣ್ಣಾವಲಿನ ಸಾಮಾನ್ಯ ಕೈದಿಗಳ ಬ್ಯಾರಕ್ಕೆ ಸ್ಥಳಾಂತರಿಸಲಾಗಿತ್ತು. ಆದರೆ ಬೆಂಗಳೂರಿನಲ್ಲಿ ಪ್ರಭಾವ ಬಳಸಿ ಮತ್ತೆ ಅಕ್ರಮ ಚಟುವಟಿಕೆ ಮುಂದುವರಿಯುವ ಆತಂಕ ಮತ್ತು ಭದ್ರತಾ ಕಾರಣಗಳಿಂದ, ಕಠಿಣ ನಿಯಮಗಳಿರುವ ದೂರದ ಹಿಂಡಲಗಾ ಜೈಲಿಗೆ ವರ್ಗಾಯಿಸಲು ಕಾರಾಗೃಹ ಇಲಾಖೆ ಮುಂದಾಗಿದೆ.

ಕಾರಾಗೃಹ ಮತ್ತು ಸುಧಾರಣೆ ಸೇವೆ ಇಲಾಖೆ ಡಿಜಿಪಿ ಅಲೋಕ್ ಕುಮಾರ್ ಅವರು ಈ ಬಗ್ಗೆ ಆದೇಶ ಹೊರಡಿಸಿದ್ದಾರೆ.

ತನಿಖೆಯಲ್ಲಿ ಬಯಲಾದ ವಿಷಯ:

ಮೊಬೈಲ್ ಬಳಕೆ ಪ್ರಕರಣ
ತನಿಖೆಯಲ್ಲಿ ಬಯಲಾದ ವಿಷಯ:

ಮೊಬೈಲ್ ಬಳಕೆ ಪ್ರಕರಣ ಸಂಬಂಧ ಪ್ರಜ್ವಲ್‌ ಹಾಗೂ ಸಹಾಯ ಮಾಡಿದ್ದ ವಿಚಾರಣಾಧೀನ ಕೈದಿ ಪ್ರತಾಪ್ ರೇ ಇಬ್ಬರನ್ನೂ ಎಸಿಜೆಎಂ ನ್ಯಾಯಾಲಯ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿತ್ತು. ಮೊಬೈಲ್‌ ತಂದುಕೊಟ್ಟದ್ದು ಯಾರು, ಯಾರ ಜತೆ ಮಾತನಾಡಿದ್ದು ಎಂಬ ಪ್ರಶ್ನೆಗೆ ಪ್ರಜ್ವಲ್ ಸ್ಪಷ್ಟ ಉತ್ತರ ನೀಡಿಲ್ಲ. ಪ್ರತಾಪ್ ರೇ ಮೊಬೈಲ್‌ ಕೊಟ್ಟಿದ್ದು, ಅದನ್ನೇ ಬಳಸುತ್ತಿದ್ದೆ, ಬೇರೆ ಮಾಹಿತಿ ಗೊತ್ತಿಲ್ಲ ಎಂದು ಪ್ರಜ್ವಲ್ ಹೇಳಿಕೆ ನೀಡಿದ್ದಾರೆ. ಪ್ರತಾಪ್ ರೇ ಕೂಡ ತನಗೆ ಮೊಬೈಲ್ಲೂ ಸಂಬಂಧವಿಲ್ಲ ಎಂದು ಹೇಳಿದ್ದಾನೆ. ಪ್ರಜ್ವಲ್, ಜೈಲಿನಿಂದಲೇ ತಂದೆ ರೇವಣ್ಣ, ತಾಯಿ ಭವಾನಿ ಹಾಗೂ ಸ್ನೇಹಿತರಿಗೆ ಮೊಬೈಲ್ ಕರೆ ಮಾಡಿ ಮಾತನಾಡಿರುವುದು ತನಿಖೆಯಲ್ಲಿ ಗೊತ್ತಾಗಿತ್ತು.

ದರ್ಶನ್ ಪ್ರಕರಣದಲ್ಲಿ ಇದೇ
ಮಾದರಿ: ಇದಕ್ಕೂ ಮೊದಲು ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ನಟ ದರ್ಶನ್ ಅವರಿಗೆ ಜೈಲಿನಲ್ಲಿ ವಿಶೇಷ ಸೌಲಭ್ಯ ಸಿಕ್ಕ ವಿವಾದ ಭುಗಿಲೆದ್ದಾಗಲೂ ಅವರನ್ನು ಬಳ್ಳಾರಿ ಜೈಲಿಗೆ ಹಾಗೂ ಇತರ ಆರೋಪಿಗಳನ್ನು ಹಿಂಡಲಗಾ ಸೇರಿದಂತೆ ವಿವಿಧ ಜಿಲ್ಲೆಗಳ ಜೈಲುಗಳಿಗೆ ಸ್ಥಳಾಂತರಿಸಲಾಗಿತ್ತು. ಈಗ ಅದೇ ಮಾದರಿಯಲ್ಲಿ ಪ್ರಜ್ವಲ್ ವರ್ಗಾವಣೆಯಾಗಿದೆ. ಒಟ್ಟಾರೆ, ಜೈಲಿನ ಒಳಗೂ ಅಕ್ರಮ ಸಂಪರ್ಕ ಮತ್ತು ಸೌಲಭ್ಯಗಳ ವಿವಾದ ಮುಂದುವರಿದಿರುವುದು ಕಾರಾಗೃಹ ಇಲಾಖೆಯ ಭದ್ರತೆ ಮತ್ತು ನಿರ್ವಹಣೆ ಬಗ್ಗೆ ಗಂಭೀರ ಪ್ರಶ್ನೆಗಳನ್ನು ಎತ್ತಿದೆ.

ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರನ್ನು ಬೆಂಗಳೂರಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಿಂದ ಬೆಳಗಾವಿಯ ಹಿಂಡಲಗಾ ಕೇಂದ್ರ ಕಾರಾಗೃಹಕ್ಕೆ ಸ್ಥಳಾಂತರಿಸುವ ಪ್ರಕ್ರಿಯೆಗೆ ಸಿದ್ಧತೆ ನಡೆಯುತ್ತಿದೆ. ಈ ಸಂಬಂಧ ಹಿಂಡಲಗಾ ಜೈಲಿನ ಮುಖ್ಯ ಅಧೀಕ್ಷಕರಿಗೆ ಅಧಿಕೃತ ಇ-ಮೇಲ್ ಬಂದಿರುವ ಮಾಹಿತಿ ಲಭ್ಯವಾಗಿದೆ.

ಪ್ರಜ್ವಲ್ ರೇವಣ್ಣ ಅವರನ್ನು ಬೆಳಗಾವಿಗೆ ಸ್ಥಳಾಂತರಿಸುವ ಕುರಿತು ಇ-ಮೇಲ್ ಮೂಲಕ ಮಾಹಿತಿ ರವಾನಿಸಲಾಗಿದ್ದು, ಅಗತ್ಯ ಸಿದ್ಧತೆಗಳನ್ನು ತ್ವರಿತವಾಗಿ ಕೈಗೊಳ್ಳುವಂತೆ ಸೂಚನೆ ನೀಡಲಾಗಿದೆ ಎಂದು ತಿಳಿದುಬಂದಿದೆ. ಈ ಹಿನ್ನೆಲೆಯಲ್ಲಿ ಹಿಂಡಲಗಾ ಜೈಲಿನ ಅಧಿಕಾರಿಗಳು ಸಿದ್ಧತೆ ಮಾಡಿಕೊಳ್ಳುತ್ತಿದ್ದಾರೆ ಎನ್ನಲಾಗಿದೆ.

ಎಸ್ಕಾರ್ಟ್ ಭದ್ರತೆಯೊಂದಿಗೆ ಪ್ರಜ್ವಲ್ ರೇವಣ್ಣ ಅವರನ್ನು ಯಾವುದೇ ಕ್ಷಣದಲ್ಲಿ ಬೆಳಗಾವಿಗೆ ಕರೆತರಬಹುದು ಎಂಬ ಚರ್ಚೆ ಜೈಲು ವಲಯದಲ್ಲಿ ನಡೆದಿದೆ.

ಪರಪ್ಪನ ಅಗ್ರಹಾರ ಜೈಲಿನಲ್ಲಿ ಮೊಬೈಲ್ ಪತ್ತೆಯಾದ ಪ್ರಕರಣದ ಬೆನ್ನಲ್ಲೇ ಪ್ರಜ್ವಲ್ ರೇವಣ್ಣ ಅವರ ಸ್ಥಳಾಂತರದ ವಿಚಾರ ಮುನ್ನೆಲೆಗೆ ಬಂದಿದೆ. ಈ ಬೆಳವಣಿಗೆ ಕುತೂಹಲಕ್ಕೆ ಕಾರಣವಾಗಿದೆ.

ಆದರೆ, ಸ್ಥಳಾಂತರದ ಕುರಿತು ಅಧಿಕೃತವಾಗಿ ಹೆಚ್ಚಿನ ವಿವರಗಳು ಲಭ್ಯವಾಗಿಲ್ಲ.

Team Udayaprabha
";