ಬೆಂಗಳೂರು :
ರಾಜ್ಯದಲ್ಲಿ ಲೋಕಸಭಾ ಚುನಾವಣೆ ಘೋಷಣೆಗೆ ಮುನ್ನವೇ ಬಿಜೆಪಿಯಿಂದ ಭರ್ಜರಿ ಸಿದ್ಧತೆಯನ್ನು ಮಾಡಿಕೊಳ್ಳಲಾಗಿದೆ. ನಿನ್ನೆಯಷ್ಟೇ ಕಾಂಗ್ರೆಸ್ ನಿಂದ ಜಿಲ್ಲಾ ಉಸ್ತುವಾರಿಗಳನ್ನು ನೇಮಕ ಮಾಡಲಾಗಿತ್ತು. ಈ ಬೆನ್ನಲ್ಲೇ ಬಿಜೆಪಿಯಿಂದ ರಾಜ್ಯ ಉಸ್ತುವಾರಿಗಳನ್ನು ಮಾಡಿ ನೇಮಕ ಮಾಡಿದೆ.
ಈ ಸಂಬಂಧ ಬಿಜೆಪಿ ಹೈಕಮಾಂಡ್ ಆದೇಶ ಹೊರಡಿಸಿದ್ದು, ಲೋಕಸಭಾ ಚುನಾವಣೆಗೆ ಬಿಜೆಪಿ ಸಜ್ಜಾಗಿದೆ. ಅದರ ಸಲುವಾಗಿ ರಾಜ್ಯ ಉಸ್ತುವಾರಿಗಳನ್ನು ನೇಮಕ ಮಾಡಲಾಗಿದೆ ಅಂತ ತಿಳಿಸಿದ್ದಾರೆ.
ಇನ್ನೂ ವಿವಿಧ ರಾಜ್ಯಗಳಿಗೆ ಜಿಲ್ಲಾ ಉಸ್ತುವಾರಿಗಳನ್ನು ನೇಮಕ ಮಾಡಿದಂತೆ ಕರ್ನಾಟಕ ಉಸ್ತುವಾರಿಗಳಾಗಿ ರಾಧಾ ಮೋಹನ್ ದಾಸ್ ಹಾಗೂ ಸುಧಾಕರರೆಡ್ಡಿ ನೇಮಕ ಮಾಡಲಾಗಿದೆ. ಈ ಮೂಲಕ ಲೋಕಸಭಾ ಚುನಾವಣೆಗೆ ಮಹತ್ವದ ಹೊಣೆಗಾರಿಕೆಯನ್ನು ನೀಡಲಾಗಿದೆ.