ಬೆಳಗಾವಿ:
ಬೆಳಗಾವಿಯಲ್ಲಿ ಎಂ.ಎಸ್.ಎಂ.ಇ ಟೆಕ್ನಾಲಜಿ ಸೆಂಟರ್ ನಿರ್ಮಾಣಕ್ಕೆ ಈಗಾಗಲೇ 10 ಎಕರೆ ಸ್ಥಳವನ್ನು ಗುರುತಿಸಿದ್ದು, ಆ ಸ್ಥಳದಲ್ಲಿ ಆದಷ್ಟು ಬೇಗ ಕಾಮಗಾರಿಯನ್ನು ಪ್ರಾರಂಭಿಸಬೇಕೆಂದು ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ ಅವರು ಕೇಂದ್ರ ಸಚಿವರನ್ನು ಒತ್ತಾಯಿಸಿದರು.

ನವದೆಹಲಿಯಲ್ಲಿ ಕೇಂದ್ರ ಮಧ್ಯಮ ಮತ್ತು ಸಣ್ಣ ಕೈಗಾರಿಕೆಗಳ ಸಚಿವ ನಾರಾಯಣ ರಾಣೆ ಅವರನ್ನು ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ ಅವರು ಭೇಟಿಯಾಗಿ ಈ ಬಗ್ಗೆ ಮನವಿ ಮಾಡಿಕೊಂಡಿದ್ದಾರೆ.