ಬೆಂಗಳೂರು :
ಹಳೆಯ ನಿಶ್ಚಿತ ಪಿಂಚಣಿ ವ್ಯವಸ್ಥೆ ಮರುಸ್ಥಾಪಿಸಬೇಕು ಎಂಬುದು ಸೇರಿ ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ರಾಜ್ಯ ಸರ್ಕಾರದ ವಿವಿಧ ಇಲಾಖಾ ಹಾಗೂ ವೃಂದ ಸಂಘಗಳ ಜಂಟಿ ಕ್ರಿಯಾ ಸಮಿತಿ ನೇತೃತ್ವದಲ್ಲಿ ಬುಧವಾರ (ಫೆ.7) ಬೆಂಗಳೂರಿನಲ್ಲಿ ಪ್ರತಿಭಟನೆ ನಡೆಸಲಿವೆ.
ಸರ್ಕಾರದ విವಿಧ ಇಲಾಖೆಗಳು ಹಾಗೂ ವೃಂಧ ಸಂಘಗಳ ಜಂಟಿ ಕ್ರಿಯಾ ಸಮಿತಿ ನೇತೃತ್ವ ವಹಿಸಲಿವೆ.
ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ರಾಜ್ಯ ನೌಕರರ ಒಕ್ಕೂಟದ ಅಧ್ಯಕ್ಷ ಜೈಕುಮಾರ್, ವೇತನ ಪರಿಷ್ಕರಣೆ ವಿಳಂಬ ಆಗಿರುವ ಕಾರಣ ನೌಕರರಿಗೆ ಅನ್ಯಾಯವಾಗುತ್ತಿದೆ. ಏಳನೇ ವೇತನ ಪರಿಷ್ಕರಣೆಯನ್ನು ಶೀಘ್ರ ಜಾರಿಗೊಳಿಸಬೇಕು. ಗುತ್ತಿಗೆ, ಹೊರಗುತ್ತಿಗೆ, ಅರೆ ಕಾಲಿಕ ನೇಮಕಾತಿಯಲ್ಲಿ ದುಡಿಯುತ್ತಿ ರುವ ನೌಕರರಿಗೆ ಸುಪ್ರೀಂ ಕೋರ್ಟ್ ಆದೇಶದಂತೆ ಸಮಾನ ಕೆಲಸಕ್ಕೆ ಸಮಾನ ವೇತನ ನೀಡಬೇಕು. ಕೋವಿಡ್ ನೆಪದಲ್ಲಿ ತಡೆಹಿಡಿದ 18 ತಿಂಗಳ ತುಟ್ಟಿಭತ್ಯೆಯನ್ನು ಬಿಡುಗಡೆ ಮಾಡಬೇಕು. ಆಡಳಿತ ಸುಧಾರಣೆ ನೆಪದಲ್ಲಿ ಇಲಾಖೆಗಳ ವಿಲೀನ, ನೌಕರರ ಸಂಖ್ಯೆ ಕಡಿತ ಮಾಡುವುದನ್ನು ತಡೆಯಬೇಕು ಎಂದು ಆಗ್ರಹಿಸಿ ಪ್ರತಿಭಟಿಸಲಾಗುವುದು ಎಂದರು.