ಅಮಾಸೆಬೈಲು:
ತಾಲೂಕು ಆಡಳಿತ, ತಾಲೂಕು ಪಂಚಾಯತ್ ಕುಂದಾಪುರ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ. ಉಡುಪಿ ಜಿಲ್ಲೆ. ಶಿಶು ಅಭಿವೃದ್ಧಿ ಯೋಜನೆ, ಶಿಕ್ಷಣ ಇಲಾಖೆ, ಆರೋಗ್ಯ ಇಲಾಖೆ ಹಾಗೂ ಅಮಾಸೆಬೈಲು ಗ್ರಾಮ ಪಂಚಾಯತ್ ಆಶ್ರಯದಲ್ಲಿ ಅಮಾಸೆಬೈಲು ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಬೇಟಿ ಪಡಾವೋ, ಬೇಟಿ ಬಚಾವೋ ಜಾಗೃತಿ ಕಾರ್ಯಕ್ರಮ ಸಂಪನ್ನಗೊಂಡಿತು.
ಅಮಾಸೆಬೈಲು ಗ್ರಾಮ ಪಂಚಾಯತ್ ಅಧ್ಯಕ್ಷ ಮಲ್ಲಿಕಾ ಕುಲಾಲ್ ಅಧ್ಯಕ್ಷತೆ ವಹಿಸಿದ್ದರು. ಅಂಗನವಾಡಿ ಮೇಲ್ವಿಚಾರಕಿ ಶಿಕ್ಷಕಿ ಸವಿತಾ ಶೆಟ್ಟಿ ಪ್ರಾಸ್ತಾವಿಕವಾಗಿ ಮಾತನಾಡಿ ಕಾರ್ಯಕ್ರಮದ ಧ್ಯೇಯೋಧ್ದೇಶದ ಬಗ್ಗೆ ತಿಳಿಸಿಕೊಟ್ಟರು. ಪ್ರಾಥಮಿಕ ಆರೋಗ್ಯ ಕೇಂದ್ರ ಅಮಾಸೆಬೈಲಿನ ವೈದ್ಯಾಧಿಕಾರಿ ಹೇಮಲತಾ ಶೆಟ್ಟಿ ಅವರು ಹೆಣ್ಣುಮಕ್ಕಳು ಮತ್ತು ಮಹಿಳೆಯರಿಗೆ ಅಗತ್ಯವಾದ ಮಾಹಿತಿಯನ್ನು ನೀಡಿದರು. ಅಮಾಸೆಬೈಲು ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ರಾಜೇಶ್ ಶೆಣೈ ಉದ್ಘಾಟಿಸಿ ಮಾತನಾಡಿದರು. ಮಹಿಳೆಯರು ಮತ್ತು ಮಕ್ಕಳು ಸರಕಾರದ ಯೋಜನೆಗಳನ್ನು ಸದುಪಯೋಗ ಮಾಡಿಕೊಳ್ಳುವಂತೆ ಕರೆ ನೀಡಿದರು. ಶಾಲೆಯ ಮುಖ್ಯ ಶಿಕ್ಷಕ ರತ್ನಾಕರ್ ನಾಯ್ಕ್, ಕ್ಲಸ್ಟರ್ ಆರೋಗ್ಯ ಅಧಿಕಾರಿ ಪವಿತ್ರ,ವಿವಿಧ ಅಂಗನವಾಡಿ ಶಿಕ್ಷಕಿಯರು ಉಪಸ್ಥಿತರಿದ್ದರು. ಮಹಿಳೆಯರ ಆರೋಗ್ಯ ತಪಾಸಣೆ, ಗಿಡ ನೆಡುವ ಕಾರ್ಯಕ್ರಮಗಳು ನಡೆಯಿತು.
ಮಚ್ಚಟ್ಟು- 1ರ ಅಂಗನವಾಡಿ ಶಿಕ್ಷಕಿ ಶೋಭ ಸರ್ವರನ್ನು ಸ್ವಾಗತಿಸಿದರು.ಶಾಲೆಯ ಶಿಕ್ಷಕರಾದ ಶಶಿಧರ ಶೆಟ್ಟಿ ಕಾರ್ಯಕ್ರಮ ನಿರ್ವಹಿಸಿದರು, ಮಚ್ಚಟ್ಟು -3 ಅಂಗನವಾಡಿ ಶಿಕ್ಷಕಿ ಶಕೀಲ್ ವಂದಿಸಿದರು.