ಚಿಕ್ಕೋಡಿ, ಗೋಕಾಕ ಪಾಲಿಗೆ ಶುಭ ಶುಕ್ರವಾರ ?
ಬೆಂಗಳೂರು :
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಜೆಟ್ನಲ್ಲಿ ಎರಡು ಹೊಸ ಜಿಲ್ಲೆಗಳನ್ನು ಘೋಷಿಸುವ ಸಾಧ್ಯತೆಯಿದೆ. ಭೌಗೋಳಿಕವಾಗಿ ದೊಡ್ಡ ಜಿಲ್ಲೆಯಾಗಿರುವ ಬೆಳಗಾವಿಯಲ್ಲಿ ಗೋಕಾಕ ಹಾಗೂ ಚಿಕ್ಕೋಡಿ ಹೊಸ ಜಿಲ್ಲೆಯಾಗಿ ರಚನೆಯಾಗಲಿವೆ ಎಂದು ಹೇಳಲಾಗುತ್ತಿದೆ. 15 ತಾಲೂಕುಗಳು, 18 ವಿಧಾನಸಭಾ ಕ್ಷೇತ್ರಗಳನ್ನು ಬೆಳಗಾವಿ ಜಿಲ್ಲೆ ಹೊಂದಿದೆ. ಹಲವು ವರ್ಷಗಳಿಂದ ಚಿಕ್ಕೋಡಿ ಮತ್ತು ಗೋಕಾಕ ಅನ್ನು ಜಿಲ್ಲೆ ಮಾಡುವಂತೆ ಸಾಕಷ್ಟು ಹೋರಾಟ ನಡೆಯುತ್ತಿದೆ. ಕೊನೆಗೂ ಬೆಳಗಾವಿಯ ಗೋಕಾಕ ಹಾಗೂ ಚಿಕ್ಕೋಡಿ ನೂತನ ಜಿಲ್ಲೆಯ ರಚನೆಗೆ ಸಿದ್ದರಾಮಯ್ಯ ಹಸಿರು ನಿಶಾನೆ ತೋರಿಸುವ ಸಾಧ್ಯತೆ ಇದೆ.