ಬೆಂಗಳೂರು :
ಕಳೆದ ಸಾಲಿನ ಆಯವ್ಯಯದಲ್ಲಿ ಕ್ರೀಡಾಪಟುಗಳಿಗೆ ಪೊಲೀಸ್ ಮತ್ತು ಅರಣ್ಯ ಇಲಾಖೆಯ ನೇಮಕಾತಿಯಲ್ಲಿ ಹುದ್ದೆಗಳನ್ನು ಮೀಸಲಿಡಲಾಗುವುದೆಂದು ಘೋಷಿಸಲಾಗಿತ್ತು. ಪ್ರಸಕ್ತ ಸಾಲಿನಿಂದ ಇತರೆ ಇಲಾಖೆಗಳ ನೇಮಕಾತಿಯಲ್ಲಿಯೂ ಶೇ.2ರಷ್ಟು ಹುದ್ದೆಗಳನ್ನು ಮೀಸಲಿಡಲಾಗುವುದು.

363. ಬೆಂಗಳೂರಿನ ಉತ್ತರ ತಾಲ್ಲೂಕಿನಲ್ಲಿ ಲಭ್ಯವಿರುವ ಅಂದಾಜು 70 ಎಕರೆ ನಿವೇಶನದಲ್ಲಿ ಅತ್ಯಾಧುನಿಕ ಮತ್ತು ಅಂತಾರಾಷ್ಟ್ರೀಯ ಮಟ್ಟದ ಕ್ರೀಡಾ ಸಮುಚ್ಛಯವನ್ನು ಒಳಗೊಂಡ ಕ್ರೀಡಾ ನಗರವನ್ನು (Sports City) ಸಾರ್ವಜನಿಕ-ಖಾಸಗಿ ಸಹಭಾಗಿತ್ವದಲ್ಲಿ ಸ್ಥಾಪಿಸಲಾಗುವುದು.

364. ಬೆಂಗಳೂರಿನಲ್ಲಿ ಅಂತಾರಾಷ್ಟ್ರೀಯ ಮಟ್ಟದ ಕ್ರೀಡಾ ಸೌಕರ್ಯಗಳನ್ನು ಅಭಿವೃದ್ಧಿಪಡಿಸುವ ಉದ್ದೇಶದಿಂದ 04 ಸ್ಥಳಗಳಲ್ಲಿ ಬಹುಕ್ರೀಡಾ ಸೌಲಭ್ಯಗಳನ್ನೊಳಗೊಂಡ ಅತ್ಯಾಧುನಿಕ ಕ್ರೀಡಾ ಸಂಕೀರ್ಣಗಳನ್ನು ಸಾರ್ವಜನಿಕ ಖಾಸಗಿ ಸಹಭಾಗಿತ್ವದಲ್ಲಿ ನಿರ್ಮಿಸಲಾಗುವುದು.

365. ರಾಜ್ಯದ ವಿವಿಧ ಕ್ರೀಡೆಗಳನ್ನು ಪ್ರೋತ್ಸಾಹಿಸಲು ಹಾಗೂ ಕ್ರೀಡಾಪಟುಗಳಿಗೆ ಉತ್ತೇಜನ ನೀಡಲು Rifle Shooting Association, Hockey Karnataka, Amateur Boxing Association, Archery Association, Athletic Association, Kayaking and Canoeing Academy, Cycling Academy Vijayapura ಹಾಗೂ Fencing Association ಗಳಿಗೆ ಒಟ್ಟಾರೆ 12 ಕೋಟಿ ರೂ. ಅನುದಾನ ನೀಡಲಾಗುವುದು.

366. ರಾಜ್ಯದ ಕ್ರೀಡಾಪಟುಗಳಿಗೆ ಅತ್ಯುನ್ನತ ಸ್ಪರ್ಧಾ ಅವಕಾಶ ಒದಗಿಸಲು ಪ್ರತಿ ವರ್ಷ ಒಂದು ರಾಜ್ಯ ಮಟ್ಟದ ಒಲಿಂಪಿಕ್ಸ್ ಮತ್ತು 14 ವರ್ಷ ವಯೋಮಾನದ ಒಳಗಿನವರಿಗೆ ಮಿನಿ ಒಲಿಂಪಿಕ್ಸ್ಆ ಯೋಜಿಸಲಾಗುವುದು.

367. ಮುಂಬರುವ ಪ್ಯಾರಿಸ್ ಒಲಿಂಪಿಕ್ಸ್ನಲ್ಲಿ ಚಿನ್ನದ ಪದಕ ಗಳಿಸುವ ಕ್ರೀಡಾಪಟುಗಳಿಗೆ 06 ಕೋಟಿ ರೂ., ಬೆಳ್ಳಿ ಪದಕ ಪಡೆಯುವ ಕ್ರೀಡಾಪಟುಗಳಿಗೆ 04 ಕೋಟಿ ರೂ. ಹಾಗೂ ಕಂಚಿನ ಪದಕ ಪಡೆಯುವ ಕ್ರೀಡಾಪಟುಗಳಿಗೆ 03 ಕೋಟಿ ರೂ. ಪ್ರೋತ್ಸಾಹಧನ ನೀಡಲಾಗುವುದು.

368. ಏಷಿಯನ್ ಮತ್ತು ಕಾಮನ್ವೆಲ್ತ್ ಕ್ರೀಡಾಕೂಟಗಳಲ್ಲಿ ಚಿನ್ನದ ಪದಕ ವಿಜೇತ ಕ್ರೀಡಾಪಟುಗಳಿಗೆ 35 ಲಕ್ಷ ರೂ., ಬೆಳ್ಳಿ ಪದಕ ವಿಜೇತ ಕ್ರೀಡಾಪಟುಗಳಿಗೆ 25 ಲಕ್ಷ ರೂ. ಹಾಗೂ ಕಂಚಿನ ಪದಕ ವಿಜೇತ ಕ್ರೀಡಾಪಟುಗಳಿಗೆ 15 ಲಕ್ಷ ರೂ. ಪ್ರೋತ್ಸಾಹಧನ ನೀಡಲಾಗುವುದು.

369. ಕರ್ನಾಟಕದ ಕ್ರೀಡಾಪಟುಗಳು ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಮಟ್ಟದ ಕ್ರೀಡಾಕೂಟಗಳಲ್ಲಿ ಭಾಗವಹಿಸುವ ಸಮಯದಲ್ಲಿ ಗಾಯಗೊಂಡಲ್ಲಿ ಅವರ ಚಿಕಿತ್ಸೆಗೆ ನೆರವಾಗಲು ಆರೋಗ್ಯ ವಿಮೆ ಸೌಲಭ್ಯವನ್ನು ರಾಜ್ಯ ಸರ್ಕಾರದ ವತಿಯಿಂದ ಒದಗಿಸಲಾಗುವುದು.

370. ರಾಜ್ಯದ 14 ಸ್ಥಳಗಳಲ್ಲಿ ಮುಂದಿನ ಎರಡು ವರ್ಷದೊಳಗೆ 35 ಕೋಟಿ ರೂ. ವೆಚ್ಚದಲ್ಲಿ ಮಹಿಳಾ ಕ್ರೀಡಾ ವಸತಿ ನಿಲಯಗಳನ್ನು ನಿರ್ಮಿಸಲಾಗುವುದು. ಕೊಡಗು ಜಿಲ್ಲೆಯ ಪೊನ್ನಂಪೇಟೆಯಲ್ಲಿ 5 ಕೋಟಿ ರೂ. ವೆಚ್ಚದಲ್ಲಿ ಕ್ರೀಡಾ ವಸತಿ ನಿಲಯ ಕಟ್ಟಡವನ್ನು ನಿರ್ಮಿಸಲಾಗುವುದು. ಬಳ್ಳಾರಿಯಲ್ಲಿ ಕ್ರೀಡಾ ವಸತಿ ನಿಲಯದ ಉನ್ನತೀಕರಣ ಹಾಗೂ ಕ್ರೀಡಾ ಸೌಕರ್ಯಗಳ ಅಭಿವೃದ್ಧಿಗಾಗಿ ಜಿಲ್ಲಾ ಖನಿಜ ಪ್ರತಿಷ್ಠಾನದ ನಿಧಿಯಿಂದ 10 ಕೋಟಿ ರೂ. ಒದಗಿಸಲಾಗುವುದು.

 

*ಮಾಹಿತಿ ತಂತ್ರಜ್ಞಾನ, ಜೈವಿಕ ತಂತ್ರಜ್ಞಾನ ಹಾಗೂ ವಿಜ್ಞಾನ ಮತ್ತು ತಂತ್ರಜ್ಞಾನ*

*ನಾವು ನಾವೀನ್ಯತೆ ಮತ್ತು ತಂತ್ರಜ್ಞಾನಕ್ಕೆ ಪೂರಕ ವಾತಾವರಣ ಅಭಿವೃದ್ಧಿಪಡಿಸಬೇಕಾಗಿದೆ. ಈ ನಿಟ್ಟಿನಲ್ಲಿ ವಿನೂತನ ಕಾರ್ಯಶೈಲಿ ಹಾಗೂ ಚಿಂತನಾ ಕ್ರಮದ ಅಗತ್ಯವಿದೆ. ನಮ್ಮ ಪರಿಸರವೇ ನಾವೀನ್ಯತೆಯನ್ನು ಉತ್ತೇಜಿಸುವಂತಿರಬೇಕು.* -*ಭಾರತ ರತ್ನ ಪ್ರೊ.ಸಿ.ಎನ್.ಆರ್.ರಾವ್*

334.ಸ್ಟಾರ್ಟಪ್ ವಲಯದಲ್ಲಿ ಕರ್ನಾಟಕದ ಮುಂಚೂಣಿಯನ್ನು ಕಾಯ್ದುಕೊಳ್ಳಲು ಮೂರು ಹೊಸ ಕಾರ್ಯಕ್ರಮಗಳನ್ನು ಪ್ರಾರಂಭಿಸಲಾಗುವುದು;

• ವಿದ್ಯಾರ್ಥಿಗಳು ಮತ್ತು ಉದ್ಯಮಿಗಳಿಂದ ಪ್ರಾರಂಭವಾದ ನವೀನ ಪ್ರಯತ್ನಗಳು, ಸ್ಟಾರ್ಟಪ್ಗಳನ್ನು ಉತ್ತೇಜಿಸಲು ರಾಜೀವ್ ಗಾಂಧಿ ವಾಣಿಜ್ಯೋದ್ಯಮ ಕಾರ್ಯಕ್ರಮಗಳಡಿ ಜ್ಞಾನಾಧಾರಿತ ಮತ್ತು ತಂತ್ರಜ್ಞಾನ ಚಾಲಿತ ಪರಿಕಲ್ಪನೆಗಳು ಮತ್ತು ನಾವೀನ್ಯತೆಗಳನ್ನು ಪೋಷಿಸಲಾಗುವುದು.

• ಮಹಿಳಾ ಉದ್ಯಮಿಗಳನ್ನು ಬೆಂಬಲಿಸಲು ಮಹಿಳಾ ಉತ್ಕೃಷ್ಟತೆ ಮತ್ತು ಉದ್ಯಮಶೀಲತೆಯಲ್ಲಿ ಬೆಂಬಲ ಕಾರ್ಯಕ್ರಮ ಪ್ರಾರಂಭಿಸಲಾಗುವುದು.

• ರಾಜ್ಯದಲ್ಲಿ ಹೆಚ್ಚಿನ ಸಂಖ್ಯೆಯ ಅಗ್ರಿ ಇನ್ನೋವೇಶನ್ ಸ್ಟಾರ್ಟ್ಅಪ್ಗಳನ್ನು ಸ್ಥಾಪಿಸಲು ಸಿ-ಕ್ಯಾಂಪ್ನ ಅಗ್ರಿ ಇನ್ನೋವೇಶನ್ ಪಾರ್ಕ್ಗೆ 5 ಎಕರೆ ಭೂಮಿಯನ್ನು ಮೀಸಲಿಡಲು ಉದ್ದೇಶಿಸಲಾಗಿದೆ.

335. ತಂತ್ರಜ್ಞಾನ ಕ್ಷೇತ್ರದಲ್ಲಿ ರಾಜ್ಯವು ಮೊದಲ ಸ್ಥಾನದಲ್ಲಿದ್ದು, ಈ ಸ್ಥಾನವನ್ನು ಬಲಪಡಿಸಲು ಮತ್ತು ಉದಯೋನ್ಮುಖ ತಂತ್ರಜ್ಞಾನಗಳಿಗೆ ಉತ್ತೇಜನ ನೀಡಲು ಫಿನ್ಟೆಕ್, ಸ್ಪೇಸ್ಟೆಕ್ ಮತ್ತು ಆಟೋಮೋಟಿವ್ ಟೆಕ್ನಲ್ಲಿ ಸೆಂಟರ್ ಆಫ್ ಎಕ್ಸಲೆನ್ಸ್ ಅನ್ನು ಮುಂದಿನ 5 ವರ್ಷಗಳ ಅವಧಿಯಲ್ಲಿ 10 ಕೋಟಿ ರೂ. ವೆಚ್ಚದಲ್ಲಿ ಉದ್ಯಮಿಗಳು ಮತ್ತು ಶೈಕ್ಷಣಿಕ ಸಂಸ್ಥೆಗಳ ಸಹಯೋಗದೊಂದಿಗೆ ಸ್ಥಾಪಿಸಲಾಗುವುದು.

336. ಬೆಂಗಳೂರು ನಗರವು 400ಕ್ಕೂ ಹೆಚ್ಚು ಜಾಗತಿಕ ಸಾಮರ್ಥ್ಯ ಕೇಂದ್ರಗಳ (Global Capability Centres) ನೆಲೆಯಾಗಿದೆ.

ಈ ಹಿನ್ನೆಲೆಯಲ್ಲಿ 2024-25ನೇ ಸಾಲಿನಲ್ಲಿ ಹೊಸ ಜಾಗತಿಕ ಸಾಮರ್ಥ್ಯ ಕೇಂದ್ರಗಳ ನೀತಿಯನ್ನು ಜಾರಿಗೊಳಿಸುವ ಮೂಲಕ ಕರ್ನಾಟಕಕ್ಕೆ ಪ್ರಮುಖ ವಲಯಗಳಲ್ಲಿ ಹೂಡಿಕೆ ಆಕರ್ಷಿಸಲು ಒತ್ತು ನೀಡಲಾಗುವುದು.

337. ಬೆಂಗಳೂರಿನಾಚೆಗೂ ಉದಯೋನ್ಮುಖ ತಂತ್ರಜ್ಞಾನಗಳಲ್ಲಿ ಯುವಕರ ಕೌಶಲ್ಯಾಭಿವೃದ್ಧಿಗಾಗಿ ಕಲಬುರಗಿ, ಶಿವಮೊಗ್ಗ, ಹುಬ್ಬಳ್ಳಿ ಮತ್ತು ತುಮಕೂರಿನಲ್ಲಿ ಕರ್ನಾಟಕ ನಾವೀನ್ಯತೆ ಮತ್ತು ತಂತ್ರಜ್ಞಾನ ಸೊಸೈಟಿ ಮತ್ತು ಕಿಯೋನಿಕ್ಸ್ ಸಹಯೋಗದೊಂದಿಗೆ ಒಟ್ಟಾರೆ 12 ಕೋಟಿ ರೂ. ವೆಚ್ಚದಲ್ಲಿ ಉದಯೋನ್ಮುಖ ತಂತ್ರಜ್ಞಾನಗಳಲ್ಲಿ ಕೌಶಲ್ಯ ಮತ್ತು ನಾವೀನ್ಯತಾ ಕೇಂದ್ರಗಳನ್ನು ಸ್ಥಾಪಿಸಲಾಗುವುದು.

338. ರಾಜ್ಯದಲ್ಲಿ ಜಿನೋಮಿಕ್ಸ್ನಲ್ಲಿ ಅಧ್ಯಯನ ಮತ್ತು ಸಂಶೋಧನೆಯನ್ನು ಉತ್ತೇಜಿಸಲು ಸುಧಾರಿತ ಜಿನೋಮ್ ಎಡಿಟಿಂಗ್ ಮತ್ತು ಜೀನ್ ಥೆರಪಿ ಕೇಂದ್ರವನ್ನು ಸ್ಥಾಪಿಸಲಾಗುವುದು. ಈ ಸಂಸ್ಥೆಯು ಆರೋಗ್ಯ, ಕೃಷಿ ಮತ್ತು ಜೀವ ವಿಜ್ಞಾನದ ಇತರ ಕ್ಷೇತ್ರಗಳಲ್ಲಿ ಅತ್ಯಾಧುನಿಕ ಸಂಶೋಧನೆಗೆ ಉತ್ತೇಜನ ನೀಡಲಿದೆ.

339. ರಾಜ್ಯದಲ್ಲಿ AVGC-XR ಕಂಪನಿಗಳ ಬೆಳವಣಿಗೆಯನ್ನು ಪೋಷಿಸುವ ಮತ್ತು 30,000 ಹೊಸ ಉದ್ಯೋಗ ಸೃಜನೆಯ ಗುರಿಯೊಂದಿಗೆ AVGC-XR 3.0 ನೀತಿಯನ್ನು 2024-29ರ ಅವಧಿಗೆ
150 ಕೋಟಿ ರೂ. ಬದ್ಧತಾ ವೆಚ್ಚದೊಂದಿಗೆ ಜಾರಿಗೆ ತರಲಾಗುವುದು. ಇದರೊಂದಿಗೆ Centre of Excellence in Gaming ಅನ್ನು ಸ್ಥಾಪಿಸಲಾಗುವುದು.

340. ವಿದ್ಯಾರ್ಥಿಗಳಿಗೆ ಮತ್ತು ಸಾರ್ವಜನಿಕರಿಗೆ ವಿಜ್ಞಾನ ಮತ್ತು ತಂತ್ರಜ್ಞಾನದ ಬೆಳವಣಿಗೆಗಳನ್ನು ಉತ್ತೇಜಿಸುವ ನಿಟ್ಟಿನಲ್ಲಿ, ಚಟುವಟಿಕೆ ಆಧಾರಿತ ಪರಿಸರವನ್ನು ಒದಗಿಸಲು 3 ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ;

•ಈಗಾಗಲೇ ಅನುಮೋದನೆಗೊಂಡಿರುವ ಚಾಮರಾಜನಗರ, ಹಾಸನ, ಮಡಿಕೇರಿ, ಶಿರಸಿ, ಬೆಳಗಾವಿ, ವಿಜಯಪುರ, ಬಾಗಲಕೋಟೆ, ಗದಗ ಮತ್ತು ಧಾರವಾಡದಲ್ಲಿ ವಿಜ್ಞಾನ ಕೇಂದ್ರ/ತಾರಾಲಯಗಳನ್ನು ಕಾರ್ಯಾರಂಭಗೊಳಿಸಲಾಗುವುದು.

• ಉಡುಪಿ, ಹಾವೇರಿ, ಚಿತ್ತಾಪುರ, ಆದಿಚುಂಚನಗಿರಿ, ತುಮಕೂರಿನಲ್ಲಿ ವಿಜ್ಞಾನ ಕೇಂದ್ರಗಳ ಕಾಮಗಾರಿಯು ಪ್ರಗತಿಯಲ್ಲಿದ್ದು, ಇದನ್ನು ಪೂರ್ಣಗೊಳಿಸಲಾಗುವುದು.

• ಶಿವಮೊಗ್ಗ, ರಾಯಚೂರು, ಚಿಕ್ಕಮಗಳೂರು, ಯಾದಗಿರಿ ಮತ್ತು ಮೈಸೂರಿನಲ್ಲಿ ಕೇಂದ್ರ ಸರ್ಕಾರದ ಸಹಯೋಗದೊಂದಿಗೆ ವಿಜ್ಞಾನ ಕೇಂದ್ರ/ತಾರಾಲಯಗಳನ್ನು ಹೊಸದಾಗಿ ಸ್ಥಾಪಿಸಲಾಗುವುದು.

• ಈ ಉದ್ದೇಶಕ್ಕಾಗಿ ಪ್ರಸಕ್ತ ಸಾಲಿನಲ್ಲಿ 170 ಕೋಟಿ ರೂ.ಗಳನ್ನು ಮೀಸಲಿಡಲಾಗಿದೆ.

341. ವಿದ್ಯಾರ್ಥಿಗಳಿಗೆ ರಾತ್ರಿ ಆಕಾಶ ವೀಕ್ಷಣೆ ಮತ್ತು ಆಕಾಶ ಕಾಯಗಳ ಕುರಿತು ಆಸಕ್ತಿ ಮೂಡಿಸಲು ಕರ್ನಾಟಕ ರಾಜ್ಯ ವಸತಿ ಶಿಕ್ಷಣ ಸಂಸ್ಥೆಗಳ ಸಂಘದಡಿಯಲ್ಲಿ ಬರುವ ಒಟ್ಟು 833 ವಸತಿ ಶಾಲೆಗಳು ಹಾಗೂ ಪದವಿ ಪೂರ್ವ ಕಾಲೇಜುಗಳಿಗೆ ತಲಾ ಒಂದು ದೂರದರ್ಶಕವನ್ನು ಒಟ್ಟಾರೆ 3 ಕೋಟಿ ರೂ. ವೆಚ್ಚದಲ್ಲಿ ಒದಗಿಸಲಾಗುವುದು.

342. ಬೆಂಗಳೂರು ಇಂಡಿಯಾ ನ್ಯಾನೋ ಅಂತಾರಾಷ್ಟ್ರೀಯ ಸಮ್ಮೇಳನವನ್ನು ಆಯೋಜಿಸಲಾಗುವುದು. ಸಮ್ಮೇಳನದ ಪೂರ್ವಭಾವಿಯಾಗಿ ಜನಸಮುದಾಯದಲ್ಲಿ ವೈಜ್ಞಾನಿಕ ಮನೋಭಾವವನ್ನು ಬೆಳೆಸುವ ಉದ್ದೇಶದೊಂದಿಗೆ, ಒಂದು ತಿಂಗಳ ಕಾಲ ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಉತ್ಸವವನ್ನು ಆಯೋಜಿಸಲಾಗುವುದು.

343. ಬೆಂಗಳೂರು ನಗರದಲ್ಲಿ ಕೇಂದ್ರ ಸರ್ಕಾರದ ಸಹಭಾಗಿತ್ವದಲ್ಲಿ ಒಟ್ಟು 233 ಕೋಟಿ ರೂ. ವೆಚ್ಚದಲ್ಲಿ ವಿಜ್ಞಾನ ನಗರಿಯನ್ನು (Science City) ಸ್ಥಾಪಿಸಲಾಗುವುದು.

ರಾಜ್ಯದ ಪ್ರವಾಸೋದ್ಯಮ ಕ್ಷೇತ್ರದಲ್ಲಿನ ಅವಕಾಶಗಳನ್ನು ಸದ್ಬಳಕೆ ಮಾಡಿಕೊಳ್ಳುವ ನಿಟ್ಟಿನಲ್ಲಿ ಪ್ರಸ್ತುತ ಜಾರಿಯಲ್ಲಿರುವ ಕರ್ನಾಟಕ ಪ್ರವಾಸೋದ್ಯಮ ನೀತಿಯನ್ನು ಮತ್ತಷ್ಟು ಹೂಡಿಕೆದಾರರ ಹಾಗೂ ಪ್ರವಾಸಿಗರ ಸ್ನೇಹಿಯಾಗಿ ಮಾಡಲು, ಪರಿಷ್ಕೃತ ಪ್ರವಾಸೋದ್ಯಮ ನೀತಿ 2024-29 ಅನ್ನು ಜಾರಿಗೆ ತರಲಾಗುವುದು.

372. ಪೌರಾಣಿಕ ಹಾಗೂ ಐತಿಹಾಸಿಕವಾಗಿ ಪ್ರಖ್ಯಾತಿ ಹೊಂದಿರುವ ಕೊಪ್ಪಳ ಜಿಲ್ಲೆಯ ಅಂಜನಾದ್ರಿ ಬೆಟ್ಟ ಹಾಗೂ ಸುತ್ತಮುತ್ತಲಿನ ಪ್ರದೇಶದಲ್ಲಿ ಪ್ರವಾಸಿ ಸೌಲಭ್ಯ ಅಭಿವೃದ್ಧಿಪಡಿಸಲು 100 ಕೋಟಿ ರೂ.ಗಳನ್ನು ಒದಗಿಸಲಾಗುವುದು.

373. ರಾಜ್ಯದ ಪ್ರಮುಖ ಜಲಾಶಯಗಳಲ್ಲಿನ ಹಿನ್ನೀರಿನಲ್ಲಿ ಮತ್ತು ಕಡಲ ತೀರಗಳಲ್ಲಿ ಸಾರ್ವಜನಿಕ ಖಾಸಗಿ ಸಹಭಾಗಿತ್ವದಲ್ಲಿ ಜಲಕ್ರೀಡೆಗಳು ಮತ್ತು ಜಲಸಾಹಸ ಪ್ರವಾಸೋದ್ಯಮವನ್ನು ಅಭಿವೃದ್ಧಿಪಡಿಸಲಾಗುವುದು.

374. ಸಾಹಸ ಪ್ರವಾಸೋದ್ಯವನ್ನು ಉತ್ತೇಜಿಸಲು ರಾಜ್ಯದ ಪ್ರಮುಖ 10 ಪ್ರವಾಸಿ ತಾಣಗಳಲ್ಲಿ ಸಾರ್ವಜನಿಕ ಖಾಸಗಿ ಸಹಭಾಗಿತ್ವದಲ್ಲಿ ಕೇಬಲ್‌ ಕಾರ್‌/ ರೋಪ್‌ ವೇ ಸೌಲಭ್ಯ ಅಭಿವೃದ್ಧಿಪಡಿಸಲಾಗುವುದು.

375. ಗೋಕಾಕ ಜಲಪಾತವನ್ನು ಪ್ರೇಕ್ಷಣೀಯ ಸ್ಥಳವಾಗಿ ಅಭಿವೃದ್ಧಿ ಪಡಿಸಲಾಗುವುದು.

376. ರಾಜ್ಯದ 530 ಸಂರಕ್ಷಿತ ಸ್ಮಾರಕಗಳನ್ನು 3ಡಿ ಲೇಸರ್‌ ಸ್ಕ್ಯಾನಿಂಗ್‌ ಮೂಲಕ ಡಿಜಿಟಲ್ ದಾಖಲೀಕರಣ ಮಾಡಲಾಗಿದೆ.

ಈ ಕಾರ್ಯವನ್ನು ದೇಶದಲ್ಲಿಯೇ ಪ್ರಥಮವಾಗಿ ಕೈಗೊಂಡಿರುವ ಶ್ರೇಯಸ್ಸು ನಮ್ಮ ರಾಜ್ಯದ್ದಾಗಿದೆ. ಈ ಡಿಜಿಟಲ್‌ ಮಾಹಿತಿಗಳನ್ನು ಹೆಚ್ಚು ಪರಿಣಾಮಕಾರಿಯಾಗಿ ಮತ್ತು ಸಂವಾದಾತ್ಮಕವಾಗಿ ಅಭಿವೃದ್ಧಿಪಡಿಸಲು ಕ್ರಮವಹಿಸಲಾಗುವುದು.

377. ರಾಷ್ಟ್ರಕೂಟರ ಕಾಲದಲ್ಲಿ ಕರ್ನಾಟಕದ ಮೊಟ್ಟ ಮೊದಲ ವಿಶ್ವವಿದ್ಯಾಲಯವನ್ನು ಕಲಬುರಗಿ ಜಿಲ್ಲೆಯ ಚಿತ್ತಾಪೂರ ತಾಲ್ಲೂಕಿನ ನಾಗಾವಿಯಲ್ಲಿ ಸ್ಥಾಪಿಸಲಾಗಿತ್ತು ಎಂಬುದು ಸ್ಥಳೀಯರ ನಂಬಿಕೆ. ಅಲ್ಲಿನ ಪ್ರಾಚ್ಯಾವೇಶಗಳ ಸಂಶೋಧನೆ ಮತ್ತು ಸಂರಕ್ಷಣೆಗಾಗಿ ನೆರವು ನೀಡಲು Archaeological Survey of India (ASI) ಗೆ ಶಿಫಾರಸ್ಸು ಮಾಡಲಾಗುವುದು.

378. ಕೆ.ಎಸ್.‌ಟಿ.ಡಿ.ಸಿ ವತಿಯಿಂದ ಬಾಗಲಕೋಟೆಯ ಐಹೊಳೆಯಲ್ಲಿ ಸುಸಜ್ಜಿತವಾದ ಹೋಟೆಲ್‌ ನಿರ್ಮಿಸಲಾಗುವುದು ಹಾಗೂ ರೋರಿಚ್ ಮತ್ತು ದೇವಿಕಾರಾಣಿ ಎಸ್ಟೇಟ್‌ ಪ್ರದೇಶದಲ್ಲಿ ಮೂಲಭೂತ ಸೌಲಭ್ಯಗಳನ್ನು ಅಭಿವೃದ್ಧಿಪಡಿಸಲಾಗುವುದು.

379. ಬೀದರ್‌ ಹಾಗೂ ವಿಜಯಪುರದಲ್ಲಿ ಕರೇಜ್‌ ಎಂದು ಪ್ರಸಿದ್ಧವಾಗಿರುವ ಪುರಾತನ ನೀರು ಸರಬರಾಜು ವ್ಯವಸ್ಥೆಯನ್ನು ನುರಿತ ಸಂಸ್ಥೆಗಳ ತಾಂತ್ರಿಕ ನೆರವಿನೊಂದಿಗೆ 15 ಕೋಟಿ ರೂ. ವೆಚ್ಚದಲ್ಲಿ ಪುನಶ್ಚೇತನಗೊಳಿಸಲಾಗುವುದು.

380. ರಾಜ್ಯದಲ್ಲಿ ಪರಿಸರ ಪ್ರವಾಸೋದ್ಯಮವನ್ನು ಉತ್ತೇಜಿಸಲು ಬಂಡೀಪುರ, ದಾಂಡೇಲಿ ಮತ್ತು ಕಬಿನಿಯಲ್ಲಿ 25 ಕೋಟಿ ರೂ. ವೆಚ್ಚದಲ್ಲಿ ಇಂಟರ್‌ಪ್ರಿಟೇಷನ್‌ ಸೆಂಟರ್‌ಗಳನ್ನು ಜೆ.ಎಲ್.ಆರ್‌ ಸಂಸ್ಥೆಯ ಮೂಲಕ ನಿರ್ಮಾಣ ಮಾಡಲಾಗುವುದು.

381. ಗದಗ ಜಿಲ್ಲೆಯ ಕಪ್ಪತ್ತಗುಡ್ಡದಲ್ಲಿ ಪರಿಸರ ಪ್ರವಾಸೋದ್ಯಮಕ್ಕೆ ಉತ್ತೇಜನ ನೀಡಲಾಗುವುದು.

382. ಶ್ರೀ ಕ್ಷೇತ್ರ ರೇಣುಕಾ ಯಲ್ಲಮ್ಮನ ದೇವಸ್ಥಾನ ಹಾಗೂ ಸುತ್ತಮುತ್ತಲಿನ ಪ್ರದೇಶಗಳನ್ನು ಸಂರಕ್ಷಿಸಿ ಅಭಿವೃದ್ಧಿಗೊಳಿಸಲು ಶ್ರೀ ರೇಣುಕಾ ಯಲ್ಲಮ್ಮ ಕ್ಷೇತ್ರ ಪ್ರವಾಸೋದ್ಯಮ ಅಭಿವೃದ್ಧಿ ಮಂಡಳಿಯನ್ನು ರಚಿಸಿ ಅಧಿಸೂಚನೆ ಹೊರಡಿಸಲಾಗಿದೆ.