ಕೋಲಾರ : ಯುಗಾದಿ ಕಳೆದ ನಂತರ ರಾಜ್ಯದಲ್ಲಿ ಒಳ್ಳೆ ಬೆಳೆ ಮತ್ತು ಮಳೆಯಾಗುವ ಲಕ್ಷಣಗಳಿವೆ ಎಂದು ಕೋಡಿಮಠದ ಡಾ. ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿ ಭವಿಷ್ಯ ನುಡಿದಿದ್ದಾರೆ. ಅಲ್ಲದೇ ಇದರ ಜೊತೆಗೆ ಆಘಾತಕಾರಿ ಹೇಳಿಕೆಯನ್ನು ನೀಡಿದ್ದಾರೆ. ಸದ್ಯ ಮಳೆ-ಬೆಳೆ ಇಲ್ಲದೇ ಕಂಗಾಲಾಗಿರುವ ರೈತರಿಗೆ ಒಂದು ಸಮಾಧಾನಕರ ಭವಿಷ್ಯವೊಂದನ್ನು ಹೇಳಿದ್ದಾರೆ. ಅಲ್ಲದೇ ಮತಾದಂತೆ ಹೆಚ್ಚಾಗುತ್ತದೆ, ಬಾಂಬ್ ಸ್ಫೋಟ, ಭೂಕಂಪ ಆಗುತ್ತೆ. ಧಾರ್ಮಿಕ ಮುಖಂಡನ ಸಾವು ಸಹ ಆಗಲಿದೆ ಎಂದು ಆಘಾತಕಾರಿ ಭವಿಷ್ಯ ನುಡಿದಿದ್ದಾರೆ.
ಕೋಲಾರದ ಜಿಲ್ಲೆ ಮಾಲೂರು ಪಟ್ಟಣದ ಕಾರ್ಯಕ್ರಮವೊಂದರಲ್ಲಿ ಮಾತನಾಡಿರುವ ಕೋಡಿ ಮಠದ ಡಾ.ಶಿವನಂದ ಶಿವಯೋಗಿ ಸ್ವಾಮೀಜಿ, ಯುಗಾದಿ ಕಳೆದ ನಂತರ ರಾಜ್ಯದಲ್ಲಿ ಒಳ್ಳೆ ಬೆಳೆ ಮತ್ತು ಮಳೆಯಾಗುವ ಲಕ್ಷಣಗಳಿವೆ ಎಂದು ಭವಿಷ್ಯ ನುಡಿದರು. ಇನ್ನು ಇದೇ ವೇಳೆ ರಾಜ್ಯ ರಾಜಕೀಯ ಬಗ್ಗೆ ಯುಗಾದಿ ಕಳೆದ ನಂತರ ಹೇಳುವೆ, ಇನ್ನ ಸಾಕಷ್ಟು ಸಮಯವಿದೆ ಎಂದರು. ಜಾಗತಿಕ ಮಟ್ಟದಲ್ಲಿ ತೊಂದರೆ ಇದೆ. ಬೆಂಕಿ ಹಾವಳಿ, ನೀರಿನ ಹಾವಳಿ, ಯುದ್ದ ಆಗುತ್ತೆ. ಅನೇಕ ಸಾವು ನೋವುಗಳು ಆಗುತ್ತೆ. ಮತಾದಂತೆ ಹೆಚ್ಚಾಗುತ್ತದೆ. ಬಾಂಬ್ ಸ್ಫೋಟ, ಭೂಕಂಪ ಆಗುತ್ತೆ. ಧಾರ್ಮಿಕ ಮುಖಂಡನ ಸಾವು ಆಗಲಿದೆ ಎಂದು ಸ್ಫೋಟಕ ಭವಿಷ್ಯ ನುಡಿದರು.
2024 ರಲ್ಲಿ ಜಗತ್ತಿನ ಜನರಿಗೆ ಒಳ್ಳೆಯ ದಿನಗಳಿಲ್ಲ. ಜಗತ್ತಿನ ಪ್ರಭಾವಿ ಸಂತರೊಬ್ಬರು ಹಾಗೂ ಪ್ರಧಾನಿಗಳಿಬ್ಬರು ಸಾವಿಗೀಡಾಗುವ ಲಕ್ಷಣಗಳಿವೆ ಎಂದು ಕೋಡಿಮಠದ ಡಾ.ರಾಜೇಂದ್ರ ಸ್ವಾಮೀಜಿ ಭವಿಷ್ಯ ನುಡಿದರು. ಸುದ್ದಿಗಾರರೊಂದಿಗೆ ಮಾತನಾಡಿ, 2024ರಲ್ಲಿ ಅಕಾಲಿಕ ಮಳೆ, ಭೂಕಂಪ, ಜಲಕಂಟಕ, ಅಣುಬಾಂಬ್ ಸ್ಫೋಟದಂತಹ ಸನ್ನಿವೇಶಗಳು ಮತ್ತು ಯುದ್ಧದ ಭೀತಿಯಿಂದ ಜಗತ್ತು ತಲ್ಲಣಗೊಳ್ಳುವಂತಹ ಸ್ಥಿತಿ ನಿರ್ಮಾಣವಾಗಲಿದೆ ಎಂದರು.
ಭಾರತೀಯ ಸಂಸ್ಕೃತಿ, ಪರಂಪರೆಯಲ್ಲಿ ಭಾರತೀಯರು ದೇವರು, ಧರ್ಮ, ಸತ್ಯ, ನಂಬಿಕೆ ವಿಚಾರದಲ್ಲಿ ಪ್ರಬುದ್ಧರಾಗಿದ್ದಾರೆ. ದೇಶದ ಹಲವು ಕಡೆ ದೈವಾಂಶ ಸಂಭೂತರ ಹೆಸರಿನಲ್ಲಿ ದೇವಸ್ಥಾನ, ಗುಡಿ, ಗೋಪುರಗಳನ್ನು ನಿರ್ಮಿಸಿ ಸ್ಮರಣೆ ಮಾಡುವುದು ಸಾಮಾನ್ಯ. ಆ ದಿಸೆಯಲ್ಲಿ ಶ್ರೀರಾಮನ ದೇವಸ್ಥಾನ ಲೋಕಾರ್ಪಣೆಗೊಂಡಿರುವುದು ಧಾರ್ಮಿಕತೆಯ ಪ್ರತೀಕ ಎಂದರು.