ಬೆಳಗಾವಿ : ಅಥಣಿ ತಾಲೂಕಿನ ಯಕ್ಕಂಚಿ ಗ್ರಾಮದಲ್ಲಿ ಕಬ್ಬು ತುಂಬಿದ ಟ್ರಾಕ್ಟರ್ ನಿಂದ ಕೆಳಗೆ ಬಿದ್ದು ವಿದ್ಯಾರ್ಥಿ ಸಾವನ್ನಪ್ಪಿದ ಘಟನೆ ಸೋಮವಾರ ನಡೆದಿದೆ. ಆಯತಪ್ಪಿ ಕೆಳಗೆ ಬಿದ್ದ ವೇಳೆ ಈತನ ಮೇಲೆ ಟ್ರ್ಯಾಕ್ಟರ್ ಹರಿದು ಸಾವನ್ನಪ್ಪಿದ್ದಾನೆ. ಯಕ್ಕಂಚಿ ಗ್ರಾಮದ ಸಮರ್ಥ ಪರಶುರಾಮ ಕಾಗವಾಡ (15) ಮೃತ ವಿದ್ಯಾರ್ಥಿ. ಅಥಣಿ ಪಟ್ಟಣದ ಖಾಸಗಿ ಶಾಲೆಯಲ್ಲಿ ವ್ಯಾಸಂಗ ಮಾಡುತ್ತಿದ್ದ. ಐಗಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.