ಮಂಗಳೂರು : ಕಲಬುರ್ಗಿ ಮತ್ತು ಮಂಗಳೂರು ನಡುವೆ ಶೀಘ್ರವೇ ವಿಮಾನಯಾನ ಸಂಪರ್ಕ ಕಲ್ಪಿಸಲಾಗುತ್ತದೆ ಎಂದು ಕಲಬುರ್ಗಿ ಸಂಸದ ಡಾ.ಉಮೇಶ ಜಾಧವ ಹೇಳಿದರು.
ಕಲಬುರ್ಗಿಯ ದಕ್ಷಿಣ ಕನ್ನಡ ಸಂಘದ ಅಧ್ಯಕ್ಷ ಸದಾನಂದ ಪೆರ್ಲ ಅವರು ಈ ಬಗ್ಗೆ ಇತ್ತೀಚಿಗೆ ಮನವಿ ಸಲ್ಲಿಸಿದ್ದಾರೆ. ಕಲ್ಬುರ್ಗಿಯಿಂದ ಮಂಗಳೂರು ಸೇರಿದಂತೆ ದೇಶದ ವಿವಿಧ ಭಾಗಗಳಿಗೆ ವಿಮಾನಯಾನ ಸೌಲಭ್ಯ ಕಲ್ಪಿಸುವ ಬಗ್ಗೆ ಇಂಡಿಗೋ ಸಂಸ್ಥೆ ಹಾಗೂ ಇತರ ಕಂಪನಿಗಳ ಜೊತೆ ಮಾತುಕತೆ ಪ್ರಕ್ರಿಯೆ ಚಾಲ್ತಿಯಲ್ಲಿದೆ ಎಂದು ಸಂಸದರು ತಿಳಿಸಿದರು. ಉಡಾನ್ ಸೇವೆಯಡಿ ಹೆಚ್ಚಿನ ಸೌಲಭ್ಯ ಕಲ್ಪಿಸಲು ಕೇಂದ್ರ ಸಚಿವ ಜ್ಯೋತಿರಾದಿತ್ಯ ಸಿಂಧ್ಯಾ ಅವರು ಆಸಕ್ತರಾಗಿದ್ದಾರೆ ಎಂದು ತಿಳಿಸಿದರು.