ಆಗುಂಬೆ ಘಾಟಿಯಲ್ಲಿ ಸುರಂಗ ಮಾರ್ಗ ನಿರ್ಮಾಣ ಸಂಬಂಧ ಪರಿಶೀಲನೆ ನಡೆಸಲಾಗುವುದು ಎಂದು ಕೇಂದ್ರ ಸಚಿವ ನಿತಿನ್ ಗಡ್ಕರಿ ಘೋಷಿಸಿದ್ದಾರೆ. ಮಾಜಿ ಗೃಹ ಸಚಿವ ಹಾಗೂ ಶಾಸಕ ಆರಗ ಜ್ಞಾನೇಂದ್ರ ಅವರು ಆಗುಂಬೆ ಘಾಟಿಯಲ್ಲಿ ಆಗುತ್ತಿರುವ ಸಮಸ್ಯೆ ಹಾಗೂ ಅಲ್ಲಿ ಸುರಂಗ ಮಾರ್ಗ ನಿರ್ಮಾಣ ಮಾಡಲು ಅವಕಾಶಗಳ ಬಗ್ಗೆ ಮಾಹಿತಿ ನೀಡಿದ್ದಾರೆ. ಈ ಬಗ್ಗೆ ಇಲಾಖೆ ಅಧಿಕಾರಿಗಳ ಜೊತೆ ಚರ್ಚೆ ನಡೆಸುತ್ತೇನೆ. ನಂತರ ಸುರಂಗ ನಿರ್ಮಾಣದ ಬಗ್ಗೆ ಕ್ರಮ ಕೈಗೊಳ್ಳಲಾಗುವುದು ಎಂದು ನಿತಿನ್ ಗಡ್ಕರಿ ತಿಳಿಸಿದರು.
ಶಿವಮೊಗ್ಗ :
ಮಲೆನಾಡು-ಕರಾವಳಿ ಸಂಪರ್ಕ ಬೆಸೆಯುವ ಆಗುಂಬೆ ಘಾಟಿಯಲ್ಲಿ ಸುರಂಗ ಮಾರ್ಗ ನಿರ್ಮಾಣಕ್ಕೆ ಕೇಂದ್ರ ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಗ್ರೀನ್ ಸಿಗ್ನಲ್ ನೀಡಿದ್ದಾರೆ. ರಾಷ್ಟ್ರೀಯ ಹೆದ್ದಾರಿ ಪ್ರಕಾರ ಮತ್ತು ಲೋಕೋಪಯೋಗಿ ಇಲಾಖೆಗಳ ಸಹಯೋಗದಲ್ಲಿ ಶಿವಮೊಗ್ಗದ ನೆಹರೂ ಕ್ರೀಡಾಂಗಣದಲ್ಲಿ ಗುರುವಾರ ಆಯೋಜಿಸಲಾಗಿದ್ದ ವಿವಿಧ ಕಾಮಗಾರಿಗಳ ಉದ್ಘಾಟನೆ ಹಾಗೂ ಶಂಕುಸ್ಥಾಪನೆ ಕಾರ್ಯಕ್ರಮ ಉದ್ಘಾಟನೆ ಮಾಡಿ ಮಾತನಾಡಿದ ಅವರು, ಆಗುಂಬೆ ಘಾಟಿಯಲ್ಲಿ ಸುರಂಗ ಮಾರ್ಗ ನಿರ್ಮಾಣ ಸಂಬಂಧ ಪರಿಶೀಲನೆ ನಡೆಸಲಾಗುವುದು ಎಂದಿದ್ದಾರೆ.
ಮಾಜಿ ಗೃಹ ಸಚಿವ ಹಾಗೂ ಶಾಸಕ ಆರಗ ಜ್ಞಾನೇಂದ್ರ ಅವರು ಆಗುಂಬೆ ಘಾಟಿಯಲ್ಲಿ ಆಗುತ್ತಿರುವ ಸಮಸ್ಯೆ ಹಾಗೂ ಅಲ್ಲಿ ಸುರಂಗ ಮಾರ್ಗ ನಿರ್ಮಾಣ ಮಾಡಲು ಅವಕಾಶಗಳ ಬಗ್ಗೆ ಮಾಹಿತಿ ನೀಡಿದ್ದಾರೆ. ಈ ಬಗ್ಗೆ ಇಲಾಖೆ ಅಧಿಕಾರಿಗಳ ಜೊತೆ ಚರ್ಚೆ ನಡೆಸುತ್ತೇನೆ. ನಂತರ ಸುರಂಗ ನಿರ್ಮಾಣದ ಬಗ್ಗೆ ಕ್ರಮ ಕೈಗೊಳ್ಳಲಾಗುವುದು ಎಂದರು.
ಸಂಸದ ರಾಘವೇಂದ್ರ ಮೂಲಕ ಆರಗ ಜ್ಞಾನೇಂದ್ರ ಅವರು ಆಗುಂಬೆ ಘಾಟಿ ಸಮಸ್ಯೆ ಬಗ್ಗೆ ವಿಚಾರ ಪ್ರಸ್ತಾಪ ಮಾಡುತ್ತಾರೆ. ಅಲ್ಲಿದ್ದ ಅಧಿಕಾರಿಗಳನ್ನು ನಿತಿನ್ ಗಡ್ಕರಿಯವರು ಕರೆದು ಆಗುಂಬೆ ಘಾಟಿ ವಿಚಾರ ಕೇಳುತ್ತಾರೆ,ತಕ್ಷಣವೇ ಅಧಿಕಾರಿಗಳು ತಮ್ಮಲ್ಲಿದ್ದ ನಕ್ಷೆ ಸಹಿತ ಮಾಹಿತಿಯನ್ನು ಗಡ್ಕರಿಯವರಿಗೆ ತೋರಿಸಿ ಶಾಸಕ ಜ್ಞಾನೇಂದ್ರರವರ ಅಪೇಕ್ಷೆಯನ್ನು ದಾಖಲೆಗಳ ಸಹಿತ ಕೇಂದ್ರ ಸಚಿವರ ಮುಂದಿಟ್ಟಿದ್ದಾರೆ. ಈಗಾಗಲೇ ನಡೆಸಿರುವ ಘಾಟಿ ಪರ್ಯಾಯ ರಸ್ತೆ ಕುರಿತಾದ ಪ್ರಯತ್ನಗಳ ಬಗ್ಗೆಯೂ ಚರ್ಚಿಸಿ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಗಡ್ಕರಿಯವರು ತಮ್ಮ ಭಾಷಣದಲ್ಲಿ ಜ್ಞಾನೇಂದ್ರರವರ ಮನವಿಯನ್ನು ಪ್ರಸ್ತಾಪಿಸಿ ಕೂಡಲೇ ಆಗುಂಬೆ ಘಾಟಿಗೆ ಪರ್ಯಾಯವಾಗಿ ಟೆನಲ್ (ಸುರಂಗ ಮಾರ್ಗ) ನಿರ್ಮಿಸಲು ಬೇಕಾದ ಪ್ರಾಜೆಕ್ಟಿನ ಅಧ್ಯಯನ ಮಾಡಿ ಶೀಘ್ರವೇ ಮಂಜೂರಾತಿ ಕೊಡುವ ಕಾರ್ಯ ಮಾಡಲಾಗುವುದು ಎಂದಿದ್ದಾರೆ.
200 ಕೋಟಿ ಕಾಮಗಾರಿಗಳಿಗೆ ಶಂಕು ಸ್ಥಾಪನೆ
ಏಳು ಜಿಲ್ಲೆಗಳಿಗೆ ಸಂಬಂಧಿಸಿದ 6,200 ರೂ ಕೋಟಿ ಮೊತ್ತದ ಒಟ್ಟು 300 ಕಿ.ಮೀ ಉದ್ದದ ಒಟ್ಟು 18 ರಾಷ್ಟ್ರೀಯ ಹೆದ್ದಾರಿಗಳ ಕಾಮಗಾರಿಗಳ ಉದ್ಘಾಟನೆ ಹಾಗೂ 2,138.30 ಕೋಟಿ ರೂ. ಮೊತ್ತದ ಕಾಮಗಾರಿಗಳಿಗೆ ಶಿವಮೊಗ್ಗದಲ್ಲಿ ಚಾಲನೆ ನೀಡಿದರು. ಕೊಡಚಾದ್ರಿ-ಕೊಲ್ಲೂರು ನಡುವೆ ಕೇಬಲ್ ಕಾರ್ ಯೋಜನೆಯನ್ನು ಸಂಸದ ರಾಘವೇಂದ್ರ ಗಮನಕ್ಕೆ ತಂದಿದ್ದಾರೆ. ಇದು ಸೇರಿದಂತೆ ಈ ಭಾಗದ ಹಲವು ಯೋಜನೆಗಳನ್ನು 2028 ರೊಳಗೆ ಪೂರ್ಣ ಗೊಳಿಸಲಾಗುವುದು. ಜೊತೆಗೆ ತುಮಕೂರು- ಶಿವಮೊಗ್ಗದ ನಡುವೆ ನಡೆಯುತ್ತಿರುವ ಹೆದ್ದಾರಿ ನಿರ್ಮಾಣ ಕಾಮಗಾರಿ ಚುರುಕಿನಿಂದ ಸಾಗುತ್ತಿದೆ. 2024 ರ ಕೊನೆಯಲ್ಲಿ ಇದು ಪೂರ್ಣಗೊಳ್ಳುವ ಸಾಧ್ಯತೆ ಇದೆ ಎಂದರು