ಬೆಳ್ವೆ :
ಬೆಳ್ವೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಬೆಳ್ವೆ ಅಂಗನವಾಡಿ ಕೇಂದ್ರದ ಸೇವಾ ನಿವೃತ್ತ ಅಂಗನವಾಡಿ ಕಾರ್ಯಕರ್ತೆ ಜಲಜಾ ಇವರಿಗೆ ಅಭಿನಂದನೆ, ಸನ್ಮಾನ ಸಮಾರಂಭ, ಶಾಲಾ ಮಕ್ಕಳಿಗೆ ಪ್ರತಿಭಾ ಪುರಸ್ಕಾರ, ರಾಜ್ಯ ಮತ್ತು ರಾಷ್ಟ್ರ ಮಟ್ಟದ ಕ್ರೀಡಾಪಟುಗಳ
ನಾಮಫಲಕ ಅನಾವರಣ,ಇಂಗ್ಲಿಷ್ ಭಾಷಾ ಕೊಠಡಿ ಹಾಗೂ ಸ್ಮಾರ್ಟ್ ಕ್ಲಾಸ್ ಉದ್ಘಾಟನೆಯನ್ನು ಫೆ.29 ನೇ ಗುರುವಾರ ಬೆಳಿಗ್ಗೆ ಗಂ 10.15 ಕ್ಕೆ ಕುಂದಾಪುರ ಶಾಸಕ ಎ.ಕಿರಣ್ಕುಮಾರ್ ಕೊಡ್ಗಿ ಉದ್ಘಾಟಿಸಲಿದ್ದಾರೆ.
ಬೆಳ್ವೆ ಗ್ರಾಮ ಪಂಚಾಯಿತಿ ಅಧ್ಯಕ್ಷೆ ರಾಧ ಅಧ್ಯಕ್ಷತೆ ವಹಿಸಲಿದ್ದಾರೆ. ಬೆಳ್ವೆ ಶ್ರೀಗಣೇಶ್ ಕ್ಯಾಶ್ಯೂ ಸಮೂಹ ಸಂಸ್ಥೆಗಳ ಉದ್ಯಮಿ ಬಿ.ಗಣೇಶ್ ಕಿಣಿ ಬೆಳ್ವೆ, ಬೆಳ್ವೆ ಸಂದೇಶ್ ಕಿಣಿ ಮೆಮೋರಿಯಲ್ ಚಾರಿಟೇಬಲ್ ಟ್ರಸ್ಟ್
ಅಧ್ಯಕ್ಷ ಬಿ.ಸತೀಶ್ ಕಿಣಿ ಬೆಳ್ವೆ,ಬೆಳ್ವೆ ರಾಧಿಕಾ ಕ್ಯಾಶ್ಯೂ ಉದ್ಯಮಿ ಬಿ.ರಾಜೇಂದ್ರ ಕಿಣಿ ಬೆಳ್ವೆ, ಬೆಳ್ವೆ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ.ರಾಜೇಶ್ವರಿ ಎ.ಜೆ, ಕ್ಷೇತ್ರ ಕುಂದಾಪುರ ಕ್ಷೇತ್ರ ಶಿಕ್ಷಣಾಧಿಕಾರಿ ಶೋಭಾ ಶೆಟ್ಟಿ, ಶಿಶು ಅಭಿವೃದ್ಧಿ ಇಲಾಖೆ ಯೋಜನಾಧಿಕಾರಿ ಅನುರಾಧ ಹಾದಿಮನಿ, ಬ್ರಹ್ಮಾವರ ಉದ್ಯಮಿ ದಿನೇಶ್
ನಾಯರಿ, ಬೆಳ್ವೆ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಸುರೇಂದ್ರ ನಾಯ್ಕ ಯಳಂತೂರು,ಎಸ್ಡಿಎಂಸಿ ಅಧ್ಯಕ್ಷ ಅನ್ವರ್ ಹುಸೇನ್ ಭಾಗವಹಿಸಲಿದ್ದಾರೆ ಎಂದು ಮುಖ್ಯ ಶಿಕ್ಷಕಿ ಜಯಶ್ರೀ ಶೆಟ್ಟಿಗಾರ್ತಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.