ಮಂಗಳೂರು: ಮಂಗಳೂರಿನಲ್ಲಿ ಖಾಸಗಿ ಬಸ್ ವ್ಯವಹಾರ ನೋಡಿಕೊಳ್ಳುತ್ತಿದ್ದ ಬಜಾಲ್ ನಿವಾಸಿ ಪ್ರಜ್ವಲ್ ಡಿ. (35) ನೇಣು ಬಿಗಿದು ಮಾಡಿಕೊಂಡಿದ್ದಾರೆ. ಮೃತರು ಪತ್ನಿ ಮತ್ತು ನಾಲ್ಕು ವರ್ಷದ ಮಗುವನ್ನು ಅಗಲಿದ್ದಾರೆ.
ಭವಾನಿ ಬಸ್ನ ಮಾಲಕರಾಗಿದ್ದ ದಿ. ದೇವೇಂದ್ರ ಅವರ ಎರಡನೇ ಪುತ್ರ. ಮಂಗಳವಾರ ಬೆಳಗ್ಗೆ ಜೆ.ಎಂ. ರೋಡಿನ ಮನೆಯಲ್ಲಿ ಫ್ಯಾನ್ಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವುದು ಬೆಳಕಿಗೆ ಬಂದಿದೆ.
ತನ್ನ ಸಹೋದರನ ಜೊತೆ ಸೇರಿ ಪ್ರಜ್ವಲ್ ಬಸ್ಸಿನ ವ್ಯವಹಾರ ನೋಡಿಕೊಳ್ಳುತ್ತಿದ್ದರು. ಬ್ಯಾಂಕ್ ಸಾಲ ಹೊಂದಿದ್ದ ಇವರಿಗೆ ಬ್ಯಾಂಕ್ನವರು ಕಿರುಕುಳ ನೀಡುತ್ತಿದ್ದರೆಂಬ ಆರೋಪ ಕೇಳಿ ಬಂದಿದೆ. ಆದರೂ ಆತ್ಮಹತ್ಯೆಗೆ ಸ್ಪಷ್ಟ ಕಾರಣ ತಿಳಿದುಬಂದಿಲ್ಲ. ಸಂಶಯಾಸ್ಪದ ಸಾವು ಪ್ರಕರಣ ದಾಖಲಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಕಳೆದ ವರ್ಷ ಮಂಗಳೂರಿನ ಮಹೇಶ್ ಬಸ್ ಮಾಲಿಕ ಪ್ರಕಾಶ್ ಎಂಬುವವರು ತಮ್ಮ ಅಪಾರ್ಟ್ಮೆಂಟ್ನಲ್ಲಿ ಸೀಲಿಂಗ್ ಫ್ಯಾನ್ಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದರು.