ಬೆಳಗಾವಿ: ನಗರದ ಕೆ.ಎಲ್.ಎಸ್ ಸೊಸೈಟಿಯ ರಾಜಾ ಲಖಮಗೌಡ ಕಾನೂನು ಮಹಾವಿದ್ಯಾಲಯದ ಹಳೆಯ ವಿದ್ಯಾರ್ಥಿಗಳಾದ ಐಶ್ವರ್ಯ ಗುಡದಿನ್ನಿ , ಮೇಘಾ ಸೋಮಣ್ಣನವರ ಮತ್ತು ವಿಕಾಸ್ ದಳವಾಯಿ ಸಿವಿಲ್ ನ್ಯಾಯಾಧೀಶರಾಗಿ ಆಯ್ಕೆಯಾಗಿದ್ದಾರೆ ಎಂದು ಕರ್ನಾಟಕ ಹೈಕೋರ್ಟ್ ಇತ್ತೀಚಿಗೆ ಪ್ರಕಟಿಸಿರುವ ಅಧಿಸೂಚನೆಯಲ್ಲಿ ತಿಳಿಸಿದೆ.

ಕರ್ನಾಟಕ ನ್ಯಾಯಾಂಗ ಸೇವೆಗಳ (ನೇಮಕಾತಿ) ನಿಯಮಗಳು 2004 ಮತ್ತು ತಿದ್ದುಪಡಿ ನಿಯಮಗಳು 2011, 2015 ಮತ್ತು 2016ರ ಅನ್ವಯ 2023ರ ಮಾರ್ಚ್‌ 9ರಂದು ಸಿವಿಲ್‌ ನ್ಯಾಯಾಧೀಶರನ್ನು ನೇರ ನೇಮಕಾತಿಯ ಮೂಲಕ ನೇಮಕ ಮಾಡಿಕೊಳ್ಳುವ ಸಂಬಂಧ ಅಧಿಸೂಚನೆ ಹೊರಡಿಸಲಾಗಿತ್ತು. 2023ರ ನವೆಂಬರ್‌ನಲ್ಲಿ ನಡೆದಿದ್ದ ಸ್ಪರ್ಧಾತ್ಮಕ ಪರೀಕ್ಷೆ ಹಾಗೂ 30.01.2024 ರಿಂದ 01.02.2024ರ ವರೆಗೆ ನಡೆದ ವೈವಾದಲ್ಲಿ ಪಡೆದ ಅಂಕಗಳನ್ನು ಆಧರಿಸಿ ಮೆರಿಟ್‌ ಮೇಲೆ 33 ಮಂದಿ ಅಭ್ಯರ್ಥಿಗಳು ಸಿವಿಲ್‌ ನ್ಯಾಯಾಧೀಶರಾಗಿ ಆಯ್ಕೆಯಾಗಿದ್ದಾರೆ ಎಂದು ಸಿವಿಲ್‌ ನ್ಯಾಯಾಧೀಶರ ನೇಮಕಾತಿ ಸಮಿತಿಯ ಕಾರ್ಯದರ್ಶಿಯೂ ಆದ ಹೈಕೋರ್ಟ್‌ ರಿಜಿಸ್ಟ್ರಾರ್‌ ಜನರಲ್‌ ಕೆ ಎಸ್‌ ಭರತ್‌ ಕುಮಾರ್‌ ಅವರು ಅಧಿಸೂಚನೆಯಲ್ಲಿ ತಿಳಿಸಿದ್ದಾರೆ.

ಹಳೆಯ ವಿದ್ಯಾರ್ಥಿಗಳ ಈ ಸಾಧನೆಗೆ ಕೆ.ಎಲ್.ಸೊಸೈಟಿ ಅಧ್ಯಕ್ಷ ಅನಂತ ಮಂಡಗಿ , ಕಾಲೇಜಿನ ಆಡಳಿತ ಮಂಡಳಿ ಚೇರ್ಮನ್ ಎಂ.ಆರ್.ಕುಲಕರ್ಣಿ, ಸರ್ವ ಆಡಳಿತ ಸದಸ್ಯರು, ಕಾಲೇಜಿನ ಪ್ರಾಚಾರ್ಯ ಡಾ.ಎ.ಎಚ್.ಹವಾಲ್ದಾರ್, ಹಳೆ ವಿದ್ಯಾರ್ಥಿ ಸಂಘದ ಸಂಯೋಜಕ ಡಾ. ಡಿ. ಪ್ರಸನ್ನಕುಮಾರ್, ಬೋಧಕ ಹಾಗೂ ಬೋಧಕೇತರ ಸಿಬ್ಬಂದಿ ಮತ್ತು ವಿದ್ಯಾರ್ಥಿಗಳು ಹರ್ಷ ವ್ಯಕ್ತಪಡಿಸಿದರು.

THREE ALUMNI OF KLS’S RAJA LAKHAMGOUDA LAW COLLEGE SELECTED AS CIVIL JUDGE.

Belgavi: In recently held judiciary exams by Karnataka High Court , students of KLS’S R L Law College, Ms. Aishwarya Gudadinni, Ms. Megha Somannavar and Mr. Vikas Dalwai are selected as Civil Judges.
Anant Mandgi President K.L.Society, M.R Kulkarni Chairman of Governing council of the college, All management members, Dr. A.H.Hawaldar Principal of the college, Alumni Association Coordinator Dr.D. Prasannakumar, all staff members and students congratulated them on this occasion.