ಉಡುಪಿ: ಉಡುಪಿ- ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದಿಂದ ಮತ್ತೆ ಸ್ಪರ್ಧಿಸುವ ಬಯಕೆ ಹೊಂದಿರುವ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆಗೆ ಇದೀಗ ಕಣಕಿಳಿಯಲು ತೀವ್ರ ವಿರೋಧ ವ್ಯಕ್ತವಾಗಿದೆ ಚಿಕ್ಕಮಗಳೂರು ಮಾತ್ರವಲ್ಲ, ಇದೀಗ ಉಡುಪಿ ಜಿಲ್ಲೆಯಲ್ಲೂ ತೀವ್ರ ವಿರೋಧ ವ್ಯಕ್ತವಾಗುತ್ತಿದೆ. ಈ ಬಾರಿ ಉಡುಪಿ-ಚಿಕ್ಕಮಗಳೂರು ಕ್ಷೇತ್ರದಿಂದ ಹೊರಗಿನವರ ಬದಲು ಸ್ಥಳೀಯರಿಗೇ ಟಿಕೆಟ್ ನೀಡುವಂತೆ ಮಲ್ಪೆ ಭಾಗದ ಬಿಜೆಪಿ ಕಾರ್ಯಕರ್ತರು ಶನಿವಾರ ಬೃಹತ್ ಬೈಕ್ ರ್ಯಾಲಿ ನಡೆಸಿದ್ದಾರೆ. ಮಲ್ಪೆಯಿಂದ ಬೈಕ್ ರ್ಯಾಲಿಯಲ್ಲಿ ಜಿಲ್ಲಾ ಬಿಜೆಪಿ ಕಚೇರಿಗೆ ತೆರಳಿದ ಕಾರ್ಯಕರ್ತರು ಜಿಲ್ಲಾಧ್ಯಕ್ಷರಿಗೆ ಮನವಿ ಸಲ್ಲಿಸಿದರು. ಅವರಿಗೆ ಟಿಕೆಟ್ ನೀಡಲು ನಮ್ಮ ವಿರೋಧ ಇದೆ ಎಂದರು. ಕೆಲ ದಿನಗಳಿಂದ ಚಿಕ್ಕಮಗಳೂರಿ ನಲ್ಲೂ ಬಿಜೆಪಿ ಕಾರ್ಯಕರ್ತರು ಗೋಬ್ಯಾಕ್ ಶೋಭಾ ಕರಂದ್ಲಾಜೆ ಅಭಿಯಾನ ನಡೆಸುತ್ತಿದ್ದಾರೆ. 2014ರಲ್ಲಿ ಅವರಿಗೆ ಉಡುಪಿ-ಚಿಕ್ಕಮಗಳೂರಿನ ಟಿಕೆಟ್ ಸಿಕ್ಕಾಗ ಅವರನ್ನು ಬೆಂಬಲಿಸಿದ್ದೆವು. 2019ರಲ್ಲೂ ಗೆಲ್ಲಿಸಿದ್ದೆವು. ಆದರೆ ಅವರು ಮೀನುಗಾರರು ನಿತ್ಯ ಓಡಾಡುವ ಏಷ್ಯಾದ ಅತಿದೊಡ್ಡ ಮೀನುಗಾರಿಕಾ ಬಂದರು ಮಲ್ಪೆ- ಉಡುಪಿ ರಸ್ತೆ ದುರಸ್ತಿಗೆ 10 ) ವರ್ಷ ವರ್ಷದಿಂದ ಬೇಡಿಕೆ ಸಲ್ಲಿಸಿದರೂ ಸ್ಪಂದಿಸಿಲ್ಲ.
ಶೋಭಾ ಅವರ ಬದಲಿಗೆ ಈ ಬಾರಿ ಪ್ರಮೋದ್ ಮಧ್ವರಾಜ್, ಸಿ.ಟಿ.ರವಿ ಅವರಿಗೆ ಟಿಕೆಟ್ ನೀಡಬೇಕು ಎಂಬ ಬೇಡಿಕೆ ಇದೆ. ಆದರೆ ಬಿಜೆಪಿ ಹೈಕಮಾಂಡ್ ಶೋಭಾ ಅವರಿಗೆ ಮತ್ತೆ ಬಿಜೆಪಿ ಟಿಕೆಟ್ ನೀಡುವ ಸಾಧ್ಯತೆ ಹೆಚ್ಚಿದೆ.