ಕೊಲ್ಕತ್ತಾ :
ಬಿಜೆಪಿ 195 ಅಭ್ಯರ್ಥಿಗಳ ಪಟ್ಟಿಯನ್ನು ಶನಿವಾರ (ಮಾರ್ಚ್ 2) ಸಂಜೆ ಬಿಡುಗಡೆ ಮಾಡಿದೆ . ಇದರಲ್ಲಿ ಭೋಜ್ಪುರಿ ಸೂಪರ್ಸ್ಟಾರ್ ಪವನ್ ಸಿಂಗ್ ಗೂ ಟಿಕೆಟ್ ನೀಡಲಾಗಿದೆ. ಪಶ್ಚಿಮ ಬಂಗಾಳದ ಅಸನ್ನೋಲ್ ಲೋಕಸಭಾ ಕ್ಷೇತ್ರದಿಂದ ಪವನ್ ಸಿಂಗ್ ಅವರನ್ನು ಬಿಜೆಪಿ ಅಭ್ಯರ್ಥಿಯನ್ನಾಗಿ ಮಾಡಿದೆ. ಇದೀಗ ಟಿಕೆಟ್ ಸಿಕ್ಕ 24 ಗಂಟೆಗಳಲ್ಲಿ ಪವನ್ ಸಿಂಗ್ ಚುನಾವಣೆಗೆ
ಸ್ಪರ್ಧಿಸದಿರಲು ನಿರ್ಧರಿಸಿದ್ದಾರೆ ಎಂದು ಎಕ್ಸ್ ನಲ್ಲಿ ಮಾಹಿತಿ ನೀಡಿದ್ದಾರೆ. ಭೋಜ್ಪುರಿ ಸೂಪರ್ಸ್ಟಾರ್ ಭಾನುವಾರ (ಮಾರ್ಚ್ 3) ಸಾಮಾಜಿಕ ಮಾಧ್ಯಮ ಪ್ಲಾಟ್ಫಾರ್ಮ್ ಎಕ್ಸ್ನಲ್ಲಿ ಅವರು ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ ಎಂದು ಘೋಷಿಸಿದರು. ಟ್ವಿಟ್ ಮಾಡಿರುವ ಅವರು, ಭಾರತೀಯ ಜನತಾ ಪಕ್ಷದ ಉನ್ನತ ನಾಯಕತ್ವಕ್ಕೆ ನನ್ನ ಹೃತ್ತೂರ್ವಕ ಕೃತಜ್ಞತೆಗಳನ್ನು ಸಲ್ಲಿಸುತ್ತೇನೆ. ಪಕ್ಷವು ನನ್ನನ್ನು ನಂಬಿ ಅಸನ್ನೋಲ್ನಿಂದ ಟಿಕೆಟ್ ಘೋಷಣೆ ಮಾಡಿರುವುದಕ್ಕೆ ಅಭಿನಂದನೆ ಎಂದು ತಿಳಿಸಿದ್ದಾರೆ.