ಗದಗ : ಲಕ್ಷ್ಮೇಶ್ವರ ತಾಲೂಕಿನ ಗೋನಾಳ ಗ್ರಾಮದ ಮೂವರು ಸಾಲದ ಬಾಧೆ ತಾಳಲಾರದೆ ಆತ್ಮಹತ್ಯೆಗೆ ಶರಣಾಗಿದ್ದಾರೆ. ತಾಯಿ ಸಾವಕ್ಕ(45) ಸಾವಕ್ಕನ ಮಗ ಮಂಜುನಾಥ (25) ಮತ್ತು ಸಾವಕ್ಕ ಅವರ ಸಹೋದರಿ ರೇಣವ್ವ ಆತ್ಮಹತ್ಯೆ ಮಾಡಿಕೊಂಡವರು.

ಹಾವೇರಿ ಜಿಲ್ಲೆ ಸವಣೂರು ತಾಲೂಕಿನ ಯಲವಿಗಿ ಗ್ರಾಮದ ಬಳಿ ರೈಲ್ವೆ ಹಳಿಗೆ ಹಾರಿ ತಾಯಿ-ಮಗ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ತಾಯಿ- ಮಗನ ಆತ್ಮಹತ್ಯೆ ಸುದ್ದಿ ತಿಳಿದ ಸಾವಕ್ಕ ಗೋನಾಳ ಗ್ರಾಮದ ಮನೆಯಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಟ್ರ್ಯಾಕ್ಟರ್ ಸಾಲ ಕಟ್ಟುವ ವಿಷಯಕ್ಕೆ ಸಂಬಂಧಿಸಿ ಮಂಜುನಾಥ ಮನೆಯಲ್ಲಿ ಗಲಾಟೆ ಮಾಡಿಕೊಂಡಿದ್ದ ಎನ್ನಲಾಗಿದೆ. ಘಟನೆ ತಿಳಿದ ರೈಲ್ವೆ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದು ಲಕ್ಷ್ಮೇಶ್ವರ ಪೊಲೀಸರು ಅವರ ಮನೆಗೆ ತೆರಳಿ ತನಿಖೆ ನಡೆಸಿ ಪ್ರಕರಣ ದಾಖಲು ಮಾಡಿಕೊಂಡಿದ್ದಾರೆ.