ಬೆಂಗಳೂರು: ಮಹಿಳಾ ಮೋರ್ಚಾದ ನೇತೃತ್ವದಲ್ಲಿ ಮಾರ್ಚ್ 5 ರಂದು ರಾಜ್ಯದಾದ್ಯಂತ ನಾರಿಶಕ್ತಿ ಯಾತ್ರಾ ನಡೆಸಲಾಗುವುದು. ರಾಜ್ಯದ 224 ವಿಧಾನಸಭಾ ಕ್ಷೇತ್ರಗಳಲ್ಲಿ ಸ್ಕೂಟಿ, ಬೈಕ್, ಸೈಕಲ್ ಯಾತ್ರೆಗಳು ನಡೆಯಲಿದೆ ಎಂದು ಬಿಜೆಪಿ ಮಹಿಳಾ ಮೋರ್ಚಾ ರಾಜ್ಯ ಅಧ್ಯಕ್ಷೆ ಸಿ. ಮಂಜುಳಾ ತಿಳಿಸಿದರು.
ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆಯ ಹಿನ್ನೆಲೆಯಲ್ಲಿ ರಾಜ್ಯ ಹಾಗೂ ದೇಶಾದ್ಯಂತ ಮೂರು ದಿನಗಳ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ ಎಂದರು.
ಮೂರು ದಿನ ನಡೆಯಲಿರುವ ಈ ಕಾರ್ಯಕ್ರಮದಲ್ಲಿ ಮೊದಲ ದಿನ ನಗರ ಪ್ರದೇಶದ ಸ್ವ ಸಹಾಯ ಸಂಘಗಳು ಮತ್ತು ಗ್ರಾಮೀಣ ಪ್ರದೇಶದಲ್ಲಿ ಸಂಜೀವಿನಿ ಒಕ್ಕೂಟದ ಮಹಿಳೆಯರು ಹಾಗೂ ಮಹಿಳಾ ಸಂಘಟನೆಗಳು, ರಾಜಕೀಯೇತರ ಸಂಸ್ಥೆಗಳು ಇವತ್ತಿನ ಸಭೆಯಲ್ಲಿ ಪಾಲ್ಗೊಂಡಿದ್ದರು ಎಂದು ಹೇಳಿದರು.