ಬೆಳಗಾವಿ : ಹುಕ್ಕೇರಿ ತಾಲೂಕಿನ ಇಸ್ಲಾಂಪುರದಲ್ಲಿ ನಾಲ್ಕು ವರ್ಷದ ಅದ್ವೈತ ಅಕ್ಷಯ ನಾಶಿಪುಡಿ (4)ಎಂಬ ಮಗುವಿನ ಮೇಲೆ ಟಿಪ್ಪರ್ ಹರಿದ ಪರಿಣಾಮ ಮಗು ಸ್ಥಳದಲ್ಲೇ ಮೃತಪಟ್ಟಿದೆ.
ಬುಧವಾರದಂದು ಮನೆ ಮುಂದೆ ಆಟವಾಡುತ್ತಿದ್ದ ಈ ಮಗುವಿನ ಮೇಲೆ ವಾಹನದ ಹಿಂಬದಿ ಚಕ್ರ ಹರಿದು ಮಗು ಸ್ಥಳದಲ್ಲೇ ಮೃತಪಟ್ಟಿದೆ. ಚಾಲಕ ಸ್ಥಳದಲ್ಲೇ ಟಿಪ್ಪರ್ ಬಿಟ್ಟು ಪರಾರಿಯಾಗಿದ್ದಾನೆ. ಮಗುವನ್ನು ಕಳೆದುಕೊಂಡ ಕುಟುಂಬಸ್ಥರ ಆಕ್ರಂದನ ಮುಗಿಲುಮುಟ್ಟಿದೆ. ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು ಯಮಕನಮರಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.