ಬೆಳಗಾವಿ : ಬಾಗಲಕೋಟೆ ಮತ್ತು ಬೆಳಗಾವಿ ಜಿಲ್ಲೆಗಳಲ್ಲಿನ ರಾಷ್ಟ್ರೀಯ ಹೆದ್ದಾರಿ-748ಎ ನ ಬೆಳಗಾವಿ-ಹುನಗುಂದ-ರಾಚೂರು ವಿಭಾಗದ ಚತುಷ್ಪಥ ರಸ್ತೆ ಅಭಿವೃದ್ಧಿಗೆ 2,675.31 ಕೋಟಿ ರೂ.ಬಿಡುಗಡೆ ಮಾಡಿರುವುದಾಗಿ ಕೇಂದ್ರ ಭೂ ಸಾರಿಗೆ ಸಚಿವ ನಿತಿನ್ ಗಡ್ಕರಿ ತಿಳಿಸಿದ್ದಾರೆ.

ದೆಹಲಿಯಲ್ಲಿ ಈ ಬಗ್ಗೆ ಅವರು ಮಾಹಿತಿ ನೀಡಿದ್ದಾರೆ.
ಇದು ಈ ಭಾಗಗಳನ್ನು ಸಂಪರ್ಕಿಸುವ ಅತ್ಯಂತ ಪ್ರಾಮುಖ್ಯ ರಾಷ್ಟ್ರೀಯ ಹೆದ್ದಾರಿಯಾಗಿದೆ. ಈ ಹಿನ್ನಲೆಯಲ್ಲಿ ಕೇಂದ್ರ ಸರಕಾರ ಇದೀಗ ಇದಕ್ಕೆ ಬೇಕಾದ ಹಣವನ್ನು ಬಿಡುಗಡೆ ಮಾಡಿದೆ.
ಸಚಿವ ನಿತಿನ್ ಗಡ್ಕರಿ ಅವರು ಕಳೆದ ವಾರ ಬೆಳಗಾವಿಗೆ ಭೇಟಿ ನೀಡಿ ಮಹತ್ವದ ಯೋಜನೆಗಳಿಗೆ ಚಾಲನೆ ನೀಡಿದ್ದನ್ನು ಇಲ್ಲಿ ನೆನಪಿಸಬಹುದು.